ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೇ ಇನ್ನಾದರೂ ನಮ್ಮ ಪರ ಇರಿ. ನನಗೆ ನ್ಯಾಯ ಕೊಡಿಸಿ ಎಂದು ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನವಿ ಮಾಡಿದ್ದಾರೆ.
ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಸಂಪತ್ ರಾಜ್ ಬಂಧನದ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅಖಂಡ ಶ್ರೀನಿವಾಸ ಮೂರ್ತಿ, ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್ ಅವರು ನಮ್ಮ ಜೊತೆಯಿದ್ದಾರೆ. ನನಗೆ ನ್ಯಾಯ ಸಿಗುವ ಭರವಸೆಯಿದೆ ಎಂದರು.
ಮಾಜಿ ಮೇಯರ್ ಸಂಪತ್ ರಾಜ್ ಯಾವುದೇ ತಪ್ಪು ಮಾಡಿಲ್ಲವಾದರೆ ಯಾಕೆ ನಾಪತ್ತೆಯಾಗಿದ್ದ, ಆತ ಓಡಿ ಹೋಗಬಾರದಿತ್ತು. ಆತ ತಪ್ಪು ಮಾಡಿದ್ದಾನೆ. ಯಾರೇ ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು ಎಂದು ಅಖಂಡ ಶ್ರೀನಿವಾಸ ಮೂರ್ತಿ ಆಗ್ರಹಿಸಿದರು.
ಇದನ್ನೂ ಓದಿ:ಡಿಜೆ ಹಳ್ಳಿ ಗಲಭೆ ಪ್ರಕರಣ: ನಾಪತ್ತೆಯಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಬಂಧನ
ಗಲಭೆ ಪ್ರಕರಣದಲ್ಲಿ ಸಂಪತ್ ರಾಜ್ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ದಾಖಲಿಸುತ್ತಿದ್ದಂತೆ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ. 22 ದಿನಗಳ ಕಾಲ ನಾಪತ್ತೆಯಾಗಿದ್ದ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ.