Advertisement
ಅವರು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶಾಲಾ ಆವರಣದಲ್ಲಿರುವ ಭದ್ರಮ್ಮ ಮಹಾಂತಪ್ಪ ಕಲ್ಯಾಣ ಮಂಟಪದಲ್ಲಿ ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತ್ ಇವರ ಸಂಯುಕ್ತ ಆಶ್ರಯದಲ್ಲಿ ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನ ಮತ್ತು ಸಂಸ್ಥಾಪಕರಾದ ಸುತ್ತೂರು ಜಗದ್ಗುರು ಡಾ| ಶ್ರೀ ರಾಜೇಂದ್ರ ಮಹಾಸ್ವಾಮೀ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ವಚನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. 12ನೇ ಶತಮಾನದಲ್ಲಿ ಬಸವಣ್ಣ ಅವರು ಸಮಾಜದ ಸುಧಾರಣೆಗಾಗಿ ಅನುಭವ ಮಂಟಪವನ್ನು ಸ್ಥಾಪಿಸುವುದರ ಮೂಲಕ ಇಂದಿನ ಸಂವಿಧಾನದ ರಚನೆಗೆ ಪ್ರೇರಣೆಯಾಯಿತು.
Related Articles
Advertisement
ವೀರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, 800 ವರ್ಷಗಳ ಹಿಂದೆ ಬಸವಣ್ಣ ಅವರ ಅನುಭವ ಮಂಟಪದ ಪರಿಕಲ್ಪನೆ ಇಂದಿನ ಸಂವಿಧಾನದ ವ್ಯವಸ್ಥೆಯಾಗಿರುವುದಕ್ಕೆ ಪ್ರತಿಯೊಬ್ಬರೂ ಹೆಮ್ಮೆ ಪಡಬೇಕಾಗಿದೆ, ಶರಣರ ಮತ್ತು ವಚನ ಸಾಹಿತ್ಯ ಶರಣರ ಸಮಾಜ ಸುಧಾರಣೆಯ ಪರಿಕಲ್ಪನೆಯನ್ನು ನಾವೆಲ್ಲರೂ ಪಾಲನೆ ಮಾಡಬೇಕಾಗಿದೆಎಂದರು.
ಕಾರ್ಯಕ್ರಮದಲ್ಲಿ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ದಿನದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯ ಕ್ರಮದಲ್ಲಿ ಜಿಲ್ಲಾ ಜಾನಪದ ಪರಿಷತ್ತ್ ಅಧ್ಯಕ್ಷ ಬಿ.ಎಸ್. ಅನಂತಶಯನ, ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎಸ್. ಲೋಕೇಶ್‌ಸಾಗರ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್.ಕುಟ್ಟಪ್ಪ, ಜಿಲ್ಲಾ ಜನಜಾಗೃತಿ ಸಮಿತಿ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಕಲ್ಲುಮಠದ ಮಹಾಂತ ಸ್ವಾಮೀಜಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ಅಧ್ಯಕ್ಷ ಎಸ್. ಮಹೇಶ್ ಮಾತನಾಡಿದರು. ಸಮಾರಂಭದಲ್ಲಿ ಸೋಮವಾರಪೇಟೆ ತಾ. ವೀರಶೈವ ಸಮಾಜ ಅಧ್ಯಕ್ಷ ಸಿ.ವಿ. ವಿಶ್ವನಾಥ್, ಪ್ರಮುಖರಾದ ವರಪ್ರಸಾದ್, ಬಿ.ಕೆ. ಯತೀಶ್, ಕೆ.ಪಿ. ಜಯಕುಮಾರ್, ಹೆಚ್.ಎಸ್. ಪ್ರೇಮ್‌ನಾಥ್, ಡಿ.ಬಿ. ಸೋಮಪ್ಪ, ಎಸ್.ಎಂ. ಡಿ’ಸಿಲ್ವ, ಜಿ.ಎಂ. ಕಾಂತರಾಜು, ಶೀಲಾ ಡಿ’ಸಿಲ್ವ ಮುಂತಾ ದವರು ಇದ್ದರು. ಈ ಸಂದರ್ಭದಲ್ಲಿ ಮೈಸೂರಿನ ಸುಗಮ ಸಂಗೀತ ಕಲಾವಿದರಿಂದ ವಚನ ಗಾಯನ ಕಾರ್ಯಕ್ರಮ ನಡೆಯಿತು.