Advertisement

ಬಿಜೆಪಿಗೆ ಅವಕಾಶ ಕೊಡಲ್ಲ, ಬಿಎಸ್ಪಿ ಜೊತೆ ಮೈತ್ರಿ ಸಾಧ್ಯತೆ: ಅಖಿಲೇಶ್

07:36 PM Mar 09, 2017 | Team Udayavani |

ಲಕ್ನೋ: ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾಗುತ್ತಿದ್ದಂತೆಯೇ, ಜಿದ್ದಾಜಿದ್ದಿನ ಹಾಗೂ ಪ್ರತಿಷ್ಠೆಯ ಕಣವಾಗಿದ್ದ ಉತ್ತರಪ್ರದೇಶದಲ್ಲಿ ಅತಂತ್ರ ವಿಧಾನಸಭೆ ಸಾಧ್ಯತೆ ಹಿನ್ನೆಲೆಯಲ್ಲಿ, ಮಾಯಾವತಿ ನೇತೃತ್ವದ ಬಿಎಸ್ಪಿ ಜೊತೆ ಹೊಂದಾಣಿ ಮಾಡಿಕೊಳ್ಳುವ ಇಚ್ಚೆಯನ್ನು ಮುಖ್ಯಮಂತ್ರಿ ಅಖಿಲೇಶ್ ಯಾದವ್ ವ್ಯಕ್ತಪಡಿಸಿದ್ದಾರೆ.

Advertisement

ಎಸ್ಪಿ, ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುಮತ ಅಸಾಧ್ಯ ಎಂಬ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾದ ಬಳಿಕ ಖಾಸಗಿ ವಾಹಿನಿ ಜೊತೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅಖಿಲೇಶ್, ಯುಪಿಯಲ್ಲಿ ಬಿಎಸ್ಪಿ ಜೊತೆ ಮೈತ್ರಿ ಸಾಧ್ಯತೆ ಎಂದು ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೂ ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರದಂತೆ ತಡೆಯುವುದೇ ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next