Advertisement

Jayant Chaudhary ನೇತೃತ್ವದ RLD ಜತೆ ಮೈತ್ರಿ ಘೋಷಿಸಿಕೊಂಡ ಸಮಾಜವಾದಿ ಪಕ್ಷ

05:30 PM Jan 19, 2024 | Team Udayavani |

ಲಕ್ನೋ: ಲೋಕಸಭಾ ಚುನಾವಣೆ ಎದುರಿಸಲು ಸಿದ್ಧತೆ ನಡೆಸುತ್ತಿರುವ ಸಮಾಜವಾದಿ ಪಕ್ಷವು ಜಯಂತ್ ಚೌಧರಿ ನೇತೃತ್ವದ ಆರ್‌ಎಲ್‌ಡಿಯೊಂದಿಗೆ ಮೈತ್ರಿ ಮಾಡಿಕೊಡಿರುವುದನ್ನು ಶುಕ್ರವಾರ ಅಖಿಲೇಶ್ ಯಾದವ್ ಘೋಷಿಸಿದ್ದಾರೆ.

Advertisement

ಅಖಿಲೇಶ್ ಮತ್ತು ಜಯಂತ್ ಅವರು ಮಹತ್ವದ ಮಾತುಕತೆಯ ಬಳಿಕ ಮೈತ್ರಿಯನ್ನು ಘೋಷಿಸಿದ್ದಾರೆ. ವರದಿಗಳ ಪ್ರಕಾರ, ರಾಷ್ಟ್ರೀಯ ಲೋಕದಳ (RLD) ಉತ್ತರಪ್ರದೇಶದಲ್ಲಿ 80 ಸೀಟುಗಳ ಪೈಕಿ 7 ರಿಂದ 8 ಸೀಟುಗಳಲ್ಲಿ ಸ್ಪರ್ಧಿಸಲಿದೆ.

ಮೈತ್ರಿ ಘೋಷಣೆಗೂ ಮುನ್ನ I.N.D.I. ಮೈತ್ರಿ ಕೂಟದ ಕಾರ್ಯತಂತ್ರದ ಭಾಗವಾಗಿ ಕಾಂಗ್ರೆಸ್ ನಾಯಕರು ಅಖಿಲೇಶ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆ ಉತ್ತರಪ್ರದೇಶ ಪ್ರವೇಶಿಸಿದ ಬಳಿಕ ಮೈತ್ರಿಕೂಟದ ಸೀಟು ಹಂಚಿಕೆ ಕುರಿತು ಸ್ಪಷ್ಟ ಚಿತ್ರಣ ಹೊರ ಬೀಳಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕರು ತಿಳಿಸಿದ್ದಾರೆ.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 62 ಸ್ಥಾನಗಳನ್ನು ಗೆದ್ದಿತ್ತು. ಬಿಎಸ್ ಪಿ 10 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 5 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಆರ್ ಎಲ್ ಡಿ ಒಂದೂ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಬಿಜೆಪಿ ಮಿತ್ರ ಪಕ್ಷ ಅಪ್ನಾ ದಳ 2 ಸ್ಥಾನ ಗೆದ್ದಿತ್ತು. ಕಾಂಗ್ರೆಸ್ ಕೂಡ ಒಂದು ಸ್ಥಾನ ಮಾತ್ರ ಗೆದ್ದಿತ್ತು. ಈಗಾಗಲೇ ಮಾಯಾವತಿ ಅವರು ಬಿಎಸ್ ಪಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೇ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next