ಲಕ್ನೋ: ಸಮಾಜವಾದಿ ಪಕ್ಷದ ಸಂಸದರಾದ ಅಖಿಲೇಶ್ ಯಾದವ್ ಹಾಗೂ ಆಜಂ ಖಾನ್, ತಮ್ಮ ಲೋಕಸಭಾ ಸದಸ್ಯ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಮುಂದಿನ ಚುನಾವಣೆಗಳ ದೃಷ್ಟಿಯಿಂದ ಉತ್ತರ ಪ್ರದೇಶದಲ್ಲಿ ಪಕ್ಷವನ್ನು ಬೆಳೆಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದಾರೆನ್ನಲಾಗಿದೆ.
ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರುವ ಯತ್ನದಲ್ಲಿ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ಪಕ್ಷದ ಚಿಂತಕರ ಸರಣಿ ಸಭೆಗಳಲ್ಲಿ ಪಕ್ಷವನ್ನು ಬೇರುಮಟ್ಟದಿಂದ ಬಲವರ್ದಿಸುವಂತೆ ಸಲಹೆಗಳು ಕೇಳಿಬಂದಿದ್ದವು ಎನ್ನಲಾಗಿದೆ.
ಇದನ್ನೂ ಓದಿ:ನಾವೂ ಹಿಂದೂಗಳೇ, ಭಗವದ್ಗೀತೆ ಬಗ್ಗೆ ಹೊಟ್ಟೆ ಉರಿ ಇಲ್ಲ: ಡಿಕೆಶಿ
ಅಖಿಲೇಶ್ ಯಾದವ್ ಆಜಂಗಢ ಮತ್ತು ಆಜಂ ಖಾನ್ ಅವರು ರಾಮ್‌ಪುರ ಕ್ಷೇತ್ರದ ಲೋಕಸಭಾ ಸದಸ್ಯರು. ಇತ್ತೀಚೆಗೆ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಮುಖಂಡರೂ ಜಯ ಸಾಧಿಸಿದ್ದಾರೆ.