Advertisement

ಲೋಕಸಭಾ ಚುನಾವಣೆ;ಉತ್ತರಪ್ರದೇಶದಲ್ಲಿ ಕೈಗೆ ಶಾಕ್, ಮಾಯಾವತಿ, ಅಖಿಲೇಶ್!

09:19 AM Jan 05, 2019 | Team Udayavani |

ನವದೆಹಲಿ:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಾಮೈತ್ರಿ ಮಾಡಿಕೊಳ್ಳಬೇಕೆಂಬ ಕಾಂಗ್ರೆಸ್ ಪಕ್ಷದ ಕನಸು ಉತ್ತರಪ್ರದೇಶದಲ್ಲಿ ಭಗ್ನಗೊಂಡತಾಗಿದೆ. ಅಲ್ಲದೇ ಕಟ್ಟಾ ವೈರಿಗಳೆಂದೇ ಬಿಂಬಿತರಾಗಿದ್ದ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ “ಕೈ” ಜೋಡಿಸಿರುವುದಾಗಿ ಮೂಲಗಳು ತಿಳಿಸಿವೆ.

Advertisement

ಶುಕ್ರವಾರ ದೆಹಲಿಯಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಭೇಟಿಯಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಏತನ್ಮಧ್ಯೆ ಎಸ್ಪಿ ಹಾಗೂ ಬಿಎಸ್ಪಿ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ತಿರಸ್ಕರಿಸಿರುವುದಾಗಿ ಮೂಲಗಳು ತಿಳಿಸಿವೆ.

ಪ್ರಾದೇಶಿಕ ಪಕ್ಷಗಳಿಗೆ ಆದ್ಯತೆ ಸಿಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ಕುರಿತಂತೆ ಜನವರಿ 15ರ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಮೂಲಗಳು, ಚೌಧರಿ ಅಜಿತ್ ಸಿಂಗ್ ನೇತೃತ್ವದ ರಾಷ್ಟ್ರೀಯ ಲೋಕದಳ ಬಹುತೇಕ ಈ ಮೈತ್ರಿಕೂಟದಲ್ಲಿ ಮೂರು ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಆದರೆ ಮೈತ್ರಿಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಹೊರಗಿಟ್ಟಿದ್ದರೂ ಕೂಡಾ ಉತ್ತರಪ್ರದೇಶದ ರಾಯ್ ಬರೇಲಿ ಮತ್ತು ಅಮೇಠಿಯಲ್ಲಿ ಅಖಿಲೇಶ್ ಮತ್ತು ಮಾಯಾವತಿ ತಮ್ಮ ಪಕ್ಷಗಳಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿರುವುದಾಗಿ ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next