ಲಕ್ನೋ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ತಳ್ಳಿ ಹಾಕಿದ್ದಾರೆ. ಜತೆಗೆ ಅಮೇಠಿಯಿಂದ ಪಕ್ಷದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಮಾತುಗಳನ್ನಾಡಿದ್ದಾರೆ.
ಮುಂದಿನ ದಿನಗಳಲ್ಲಿ ಅಮೇಠಿಯ ಜನರು ದೊಡ್ಡ ಹೃದಯದಿಂದ ದೊಡ್ಡವರನ್ನೇ ಆಯ್ಕೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಅಖಿಲೇಶ್ ಹೇಳಿದ್ದಾರೆ.
ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷಗಳೆಲ್ಲ 2024ರಲ್ಲಿ ಒಟ್ಟಾಗಿ ಸ್ಪರ್ಧಿಸಬೇಕು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಕೆಲ ದಿನಗಳ ಹಿಂದಷ್ಟೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಹೇಳಿದ್ದರು.