Advertisement

ಉತ್ತರಪ್ರದೇಶ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಪಾದಯಾತ್ರೆ, ಪೊಲೀಸರಿಂದ ತಡೆ

03:26 PM Sep 19, 2022 | Team Udayavani |

ಲಕ್ನೋ: ಉತ್ತರಪ್ರದೇಶದ ಆಡಳಿತಾರೂಢ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ನೇತೃತ್ವದ  ಸಮಾಜವಾದಿ ಪಕ್ಷ ಸೋಮವಾರ(ಸೆ.19) ಪಾದಯಾತ್ರೆ ಹಮ್ಮಿಕೊಂಡಿದ್ದ, ಅಖಿಲೇಶ್ ಹಾಗೂ ಕಾರ್ಯಕರ್ತರನ್ನು ಪೊಲೀಸರು ಲಕ್ನೋದಲ್ಲಿ ಮಾರ್ಗ ಮಧ್ಯದಲ್ಲಿ ತಡೆದಿರುವುದಾಗಿ ವರದಿ ವಿವರಿಸಿದೆ.

Advertisement

ಇದನ್ನೂ ಓದಿ:ಸಹಕಾರ ಚಳುವಳಿಗೆ ಕಪ್ಪು ಚುಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಸಚಿವ ಆರಗ ಜ್ಞಾನೇಂದ್ರ

ತಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲು ಉತ್ತರಪ್ರದೇಶ ಸರಕಾರ ಭಯಪಡುತ್ತಿದೆ. ಆದರೆ ಸಂಚಾರ ದಟ್ಟಣೆ ತಪ್ಪಿಸಲು  ಶಾಸಕರಿಗೆ ಬದಲಿ ಮಾರ್ಗ ಬಳಸಲು ಸೂಚಿಸಲಾಗಿತ್ತು. ಆದರೆ ಮಾರ್ಗಸೂಚಿಯನ್ನು ಅನುಸರಿಸಲು ನಿರಾಕರಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಖಿಲೇಶ್ ಯಾದವ್ ಸೇರಿದಂತೆ ಪಕ್ಷದ ಇತರ ಶಾಸಕರು, ಸಂಸದರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ವಿಧಾನಸಭಾದ ಹೊರಭಾಗದಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಸಮೀಪ ಧರಣಿ ನಡೆಸಿ ಅಣಕು ಕಲಾಪ ನಡೆಸಿರುವುದಾಗಿ ವರದಿ ತಿಳಿಸಿದೆ.

ಪಾದಯಾತ್ರೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಬ್ಯಾರಿಕೇಡ್ ಹಾಕಲಾಗಿತ್ತು. ದಾರಿ ಮಧ್ಯೆದಲ್ಲಿಯೇ ಪ್ರತಿಭಟನಾಕಾರರನ್ನು ತಡೆದು ನಿಲ್ಲಿಸಲಾಗಿತ್ತು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next