Advertisement

Ayodhya Ram Mandir ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಹೋಗದಿರಲು ಅಖಿಲೇಶ್ ನಿರ್ಧಾರ

10:16 AM Jan 14, 2024 | Team Udayavani |

ನವದೆಹಲಿ: ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭವು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಕಾರ್ಯಕ್ರಮಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ. ಸಮಾರಂಭದ ಭಾಗವಾಗದೆ ಉದ್ಘಾಟನೆಯ ನಂತರ ಕುಟುಂಬದೊಂದಿಗೆ ದೇವಾಲಯಕ್ಕೆ ಭೇಟಿ ನೀಡುವುದಾಗಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಹೇಳಿದ್ದಾರೆ.

Advertisement

ಅಖಿಲೇಶ್ ಯಾದವ್ ಶನಿವಾರ ತಡರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪತ್ರದಲ್ಲಿ ದೇವಾಲಯದ ಟ್ರಸ್ಟ್‌ ಗೆ ಕೃತಜ್ಞತೆ ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದರು.

“ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ನಾವು ಖಂಡಿತವಾಗಿಯೂ ಕುಟುಂಬದೊಂದಿಗೆ ಭಕ್ತರಾಗಿ ಭೇಟಿ ನೀಡುತ್ತೇವೆ” ಎಂದು ಅವರು ಬರೆದಿದ್ದಾರೆ, ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದ ಸಮಾರಂಭಕ್ಕೆ “ಪ್ರೀತಿಯ ಆಹ್ವಾನ” ಕ್ಕಾಗಿ ಟ್ರಸ್ಟ್‌ಗೆ ಧನ್ಯವಾದ ಅರ್ಪಿಸಿದರು.

ಸಮಾರಂಭವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಗೆ ಅಭಿನಂದನೆ ಸಲ್ಲಿಸಿದರು. ಶುಕ್ರವಾರ ರಾಮನ ಹೆಸರಿನಲ್ಲಿ ಬಿಜೆಪಿ ವಿರೋಧ ಪಕ್ಷಗಳನ್ನು ಅವಮಾನಿಸುತ್ತಿದೆ ಎಂದು ಆರೋಪಿಸಿದ ನಂತರ ಅಖಿಲೇಶ್ ಯಾದವ್ ಈ ನಿರ್ಧಾರ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next