ದಾಂಡೇಲಿ : ನಗರ ಸಭೆಯಲ್ಲಿ ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗುತ್ತಿದೆ ಎಂದು ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ಅವರು ಆರೋಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ನಗರದಲ್ಲಿ ಸೋಮವಾರ ಹೇಳಿಕೆ ನೀಡಿದ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳಿದ್ದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ನಿಯಮದ ಪ್ರಕಾರ ಕಾಲಮಿತಿಯೊಳಗಡೆ ಮಾಹಿತಿ ನೀಡಬೇಕು.
ಆದರೆ ದಾಂಡೇಲಿ ನಗರ ಸಭೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಮಾಹಿತಿಯನ್ನು ಮೂವತ್ತು ದಿನಗಳೊಳಗೆ ನೀಡದೆ ಸತಾಯಿಸಲಾಗುತ್ತದೆ.ಮಾಹಿತಿ ಹಕ್ಕು ಕಾಯ್ದೆ ನಿಯಮಗಳನ್ನು ಪಾಲಿಸುವಲ್ಲಿ ನಗರ ಸಭೆ ಸಂಪೂರ್ಣ ವಿಫಲವಾಗಿದ್ದು, ಮಾಹಿತಿ ನೀಡಲು ವಿಳಂಬ ಮಾಡುತ್ತಿರುವುದರಿಂದ ನಗರ ಸಭೆಯ ಅಧಿಕಾರಿಗಳ ಮೇಲೆ ಅನುಮಾನ ವ್ಯಕ್ತವಾಗುತ್ತಿದೆ.
ಈ ಹಿನ್ನಲೆಯಲ್ಲಿ ಸಂಬಂಧಪಟ್ಟ ಮೇಲಾಧಿಕಾರಿಗಳು ಸೂಕ್ತ ರೀತಿಯ ಕ್ರಮವನ್ನು ಕೈಗೊಳ್ಳಬೇಕೆಂದು ಅಕ್ರಂ ಖಾನ್ ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ನ.8ರಿಂದ ದತ್ತಮಾಲಾ ಅಭಿಯಾನ; ಗಂಗಾಧರ ಕುಲಕರ್ಣಿ