Advertisement
ಕಳೆದ ಸುಮಾರು 2 ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ಜಿಲ್ಲಾಡಳಿತದ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.
Related Articles
Advertisement
ಆದ್ಯತೆ ನೀಡಿ: ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಯುವ ಅಧಿಕಾರಿ ಯಾಗಿದ್ದು ಮುಂದೆ ರಾಜ್ಯ ಮಟ್ಟದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಲಿದ್ದಾರೆ. ಆ ವೇಳೆ ಹಾಸನ ಜಿಲ್ಲೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಕೋರಿ ಶುಭ ಹಾರೈಸಿದರು.
ಉತ್ತಮ ಆಡಳಿತ: ಜಿಪಂ ಸಿಇಒ ಕೆ.ಎನ್.ವಿಜಯಾಪ್ರಕಾಶ್ ಮಾತನಾಡಿ, ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಅಕ್ರಂ ಪಾಷ ಅವರಿಬ್ಬರೂ ಅತ್ಯಂತ ಕ್ರಿಯಾಶೀಲ ಹಾಗೂ ಸಮರ್ಥ ಆಡಳಿತ ದಾರರು. ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಗೊಂದಲ ರಹಿತವಾಗಿ ಚುನಾವಣೆ ನಡೆಸುವಲ್ಲಿ ಹಾಗೂ ಮತದಾರರ ಜಾಗೃತಿ ಚಟುವಟಿಕೆ ನಡೆಸುವಲ್ಲಿ ಇಬ್ಬರು ಅಧಿಕಾರಿಗಳು ಶಕ್ತಿ ಮೀರಿ ಶ್ರಮಿಸಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅನುದಾನ ಬಿಡುಗಡೆ: ಅಕ್ರಂಪಾಷ ಅವರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವರ್ಗಾವಣೆ ಹೊಂದಿ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರ ಸ್ವೀಕರಿಸಿದ ಮೇಲೂ ಹಾಸನ ಜಿಲ್ಲೆಯ ಉದ್ಯೋಗ ಖಾತರಿ ಯೋಜನೆಯಡಿ 51 ಕೋಟಿ ರೂ.ಗಳ ಬಾಕಿ ಅನುದಾನ ಬಿಡುಗಡೆ ಮಾಡಿಕೊಟ್ಟು ಸಹಕರಿಸಿ ದ್ದಾರೆಂದು ಸಿಇಒ ಸ್ಮರಿಸಿದರು.
ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಎಚ್.ಎಲ್. ನಾಗರಾಜ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಸವಿತಾ ಮಾತನಾಡಿದರು. ಮುಜರಾಯಿ ತಹಶೀಲ್ದಾರ್ ಶಾರದಾಂಬ ಸ್ವಾಗತಿಸಿದರು.
ಸಕಲೇಶಪುರ ಉಪವಿಭಾಗಾಧಿಕಾರಿ ಕವಿತಾ, ನಗರಸಭೆ ಆಯುಕ್ತೆ ರೂಪಾಶೆಟ್ಟಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಉಪಸ್ಥಿತಿ ಇದ್ದರು.