ಮುಂಬಯಿ:ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ಹೆಚ್ಚಾದರೆ ಹಂತ ಹಂತವಾಗಿ ಒಂದೊಂದು ಚಟುವಟಿಕೆಗಳಿಗೆ ನಿಷೇಧ: ಸುಧಾಕರ್
ಅಕ್ಷಯ್ ಕುಮಾರ್ ಅವರು ಭಾನುವಾರ(ಏ.4) ಸಂಜೆ 5ಗಂಟೆಗೆ ಮುಂಬೈನ ಹೀರಾನಂದಾನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅಕ್ಷಯ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ಅಕ್ಷಯ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಭಾನುವಾರ ತಿಳಿಸಿದ್ದು, ಮನೆಯಲ್ಲಿಯೇ ಐಸೋಲೇಶನ್ ನಲ್ಲಿ ಇರುವುದಾಗಿ ಹೇಳಿದ್ದರು. ಆದರೆ ನಂತರ ವೈದ್ಯರ ಸಲಹೆ ಮೇರೆಗೆ ಹೀರಾನಂದಾನಿ ಆಸ್ಪತ್ರೆಗೆ ದಾಖಲಾಗಿದ್ದು, ನಿಮ್ಮೆಲ್ಲರ ಪ್ರೀತಿ ಮತ್ತು ಪ್ರಾರ್ಥನೆಗಾಗಿ ಪ್ರತಿಯೊಬ್ಬರಿಗೂ ಅಭಿನಂದನೆ ತಿಳಿಸುವುದಾಗಿ ಅಕ್ಷಯ್ ಹೇಳಿದ್ದಾರೆ.
ಬಾಲಿವುಡ್ ನ ಅಲಿಯಾ ಭಟ್, ರಣಬೀರ್ ಕಪೂರ್ ಸೇರಿದಂತೆ ಹಲವು ನಟ, ನಟಿಯರು ಕೋವಿಡ್ 19 ಸೋಂಕಿಗೆ ಒಳಗಾಗಿದ್ದು, ಈ ನಿಟ್ಟಿನಲ್ಲಿ ಚಿತ್ರೀಕರಣದಿಂದ ದೂರ ಉಳಿದು, ಐಸೋಲೇಶನ್ ನಲ್ಲಿ ಇದ್ದಿರುವುದಾಗಿ ವರದಿ ವಿವರಿಸಿದೆ.