Advertisement

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಮಾತೃ ವಿಯೋಗ

02:09 PM Sep 08, 2021 | Team Udayavani |

ಮುಂಬಯಿ: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಇಂದು (ಸೆ.8) ನಿಧನರಾಗಿದ್ದಾರೆ.

Advertisement

ಸೆಪ್ಟೆಂಬರ್ 3ರಂದು ಅವರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಇನ್ನು ಮಾತೃವಿಯೋಗದ ಕುರಿತು ಟ್ವೀಟ್ ಮಾಡಿರುವ ಅಕ್ಷಯ್ ಕುಮಾರ್, ‘ನನ್ನ ತಾಯಿಯೇ ನನ್ನ ಮೂಲ. ಇಂದು ನಾನು ನನ್ನ ಅಸ್ತಿತ್ವದ ಮೂಲದಲ್ಲಿ ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಶ್ರೀಮತಿ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ಬೇರೆ ಜಗತ್ತಿನಲ್ಲಿರುವ ನನ್ನ ತಂದೆಯೊಂದಿಗೆ ಅವರು ಸೇರಿಕೊಂಡರು. ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬವು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ’ ಎಂದು ಬರೆದುಕೊಂಡಿದ್ದಾರೆ.

ಅನೇಕ ದಿನಗಳಿಂದ ಅನಾರೊಗ್ಯ ಸಮಸ್ಯೆ ಎದುರಿಸುತ್ತಿದ್ದ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕಳೆದೆರಡು ದಿನಗಳ ಹಿಂದೆ ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ತಮ್ಮ ‘ಸಿಂಡ್ರೆಲಾ’ ಸಿನಿಮಾ ಶೂಟಿಂಗ್​ಗಾಗಿ ಇಂಗ್ಲೆಂಡ್​ ಪ್ರವಾಸದಲ್ಲಿದ್ದ ಅಕ್ಷಯ್ ಕುಮಾರ್ ತಾಯಿಯ ಆರೋಗ್ಯ ವಿಚಾರಿಸಲು ಮುಂಬೈಗೆ ದೌಡಾಯಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next