Advertisement

ಹೊಸ ವಾದದೊಂದಿಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿರುವ ನಿರ್ಭಯಾ ಅಪರಾಧಿ ಅಕ್ಷಯ್ ಸಿಂಗ್

09:51 AM Jan 31, 2020 | keerthan |

ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ಅಕ್ಷಯ್ ಕುಮಾರ್ ಸಿಂಗ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿ ವಿಚಾರಣೆ ಇಂದು ನಡೆಯಲಿದೆ.

Advertisement

ಪ್ರಕರಣದ ಮತ್ತೋರ್ವ ಅಪರಾಧಿ ವಿನಯ್ ಶರ್ಮಾ ಮತ್ತೆ ಕ್ಷಮಾದಾನ ಕೋರಿ ರಾಷ್ಟ್ರಪತಿಯವರಿಗೆ ಬುಧವಾರವಷ್ಟೇ ಅರ್ಜಿ ಸಲ್ಲಿಸಿದ್ದಾನೆ. ಮತ್ತೋರ್ವ ಅಪರಾಧಿ ಮುಖೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿತ್ತು.

ಜಸ್ಟಿಸ್ ಎನ್ ವಿ ರಮಣ ನೇತೃತ್ವದ ಪಂಚ ಸದಸ್ಯರ ಪೀಠದ ಮುಂದೆ ಇಂದು ಅಕ್ಷಯ್ ಸಿಂಗ್ ಕ್ಯುರೇಟಿವ್ ಅರ್ಜಿ ವಿಚಾರಣೆಗೆ ಬರಲಿದೆ. ಆದರೆ ಅಕ್ಷಯ್ ವಿಚಾರಣೆ ಬಹಿರಂಗವಾಗಿ ನಡೆಯುವುದಿಲ್ಲ. ಬದಲಾಗಿ ಚೇಂಬರ್ ನಲ್ಲಿ ನಡೆಯಲಿದೆ.

ಮಹಿಳೆಯರ ಮೇಲಿನ ಹಿಂಸೆಯ ವಿಚಾರದಲ್ಲಿ ಸಾರ್ವಜನಿಕ ಒತ್ತಡ ಮತ್ತು ಸಾರ್ವಜನಿಕ ಅಭಿಪ್ರಾಯವನ್ನು ಪರಿಗಣಿಸಿ ಕಠಿಣ ಶಿಕ್ಷೆಯನ್ನು ನೀಡಬೇಕೆಂಬ ನೆಲೆಯಲ್ಲಿ ನ್ಯಾಯಾಲಯವು ತನಗೆ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿದೆ’ ಎಂಬ ಅಂಶವನ್ನು ಆತ ತನ್ನ ಅರ್ಜಿಯಲ್ಲಿ ವಾದಿಸಿದ್ದಾನೆ

ಇಂದು ಸುಪ್ರೀಂ ಕೋರ್ಟ್ ಅಕ್ಷಯ್ ಸಿಂಗ್ ಕ್ಯುರೇಟಿವ್ ಅರ್ಜಿಯನ್ನು ತಿರಸ್ಕರಿಸಿದರೆ ಆತನಿಗೆ ರಾಷ್ಟ್ರಪತಿಯವರಿಗೆ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಬಹುದು.

Advertisement
Advertisement

Udayavani is now on Telegram. Click here to join our channel and stay updated with the latest news.

Next