ನೇತ್ರದಾನದ ಕುರಿತಾಗಿ ತಯಾರಾಗಿರುವ “ಅಕ್ಷಿ’ ಚಿತ್ರ ಬಿಡುಗಡೆಗೆ ತಯಾರಾಗಿದೆ. ಚಿತ್ರ ಡಿ.3ಕ್ಕೆ ತೆರೆಗೆ ಬರತುತ್ತಿದೆ. ಈ ವಿಚಾರ ಹೇಳಿಕೊಳ್ಳಲು ಇತ್ತೀಚೆಗೆ ಚಿತ್ರತಂಡ ಮಾಧ್ಯಮ ಮುಂದೆ ಬಂದಿತ್ತು.
ಈ ಚಿತ್ರವನ್ನು ಕಲಾದೇಗುಲ ಶ್ರೀನಿವಾಸ್ ನಿರ್ಮಿಸಿದ್ದಾರೆ. ಈ ಸಂದರ್ಭದಲ್ಲಿ ಪುನೀತ್ ಬಗ್ಗೆ ಮಾತನಾಡಿದ ಅವರು, “ಅಕ್ಟೋಬರ್ ತಿಂಗಳ ಎರಡನೇ ವಾರದಲ್ಲಿ ನಾವು ಅಪ್ಪು ಅವರನ್ನು ಭೇಟಿಯಾಗಿದ್ದೆವು, ನಾನು ಸಿನಿಮಾ ನೋಡಬೇಕು ಎಂದು ಅಪ್ಪು ಅವರು ಆಸೆ ಪಟ್ಟರು. ಅಂತೆಯೇ ನಾವು ಅವರಿಗೆ ಖಾಸಗಿ ಲಿಂಕ್ ಒಂದನ್ನು ನೀಡಿದೆವು. ಆದರೆ ಅವರು ಸಿನಿಮಾ ನೋಡಿದ್ದಾರೋ ಇಲ್ಲವೋ ಗೊತ್ತಿಲ್ಲ. ನನ್ನ ಮನಸ್ಸು ಹೇಳುತ್ತಿದೆ ಅವರು ಸಿನಿಮಾ ನೋಡಿದ್ದಾರೆಂದು. ಒಂದೊಮ್ಮೆ ಅವರು ನೋಡಿಲ್ಲವಾದರೆ ಅವರು ದಾನ ಮಾಡಿರುವ ಕಣ್ಣುಗಳಾದರೂ”ಅಕ್ಷಿ’ ಸಿನಿಮಾವನ್ನು ನೋಡುತ್ತವೆ’ ಎಂದರು.
ಇದನ್ನೂ ಓದಿ:ಮತ್ತೆ ಹೈದರಾಬಾದ್ ತಂಡದ ನಾಯಕತ್ವಕ್ಕೆ ಅಭಿಮಾನಿಯ ಬೇಡಿಕೆ! ಖಡಕ್ ಉತ್ತರ ನೀಡಿದ ವಾರ್ನರ್
ಚಿತ್ರವನ್ನು ಮನೋಜ್ ಕುಮಾರ್ ನಿರ್ದೇಶಿಸಿದ್ದಾರೆ. “ಈ ಕಥೆ ಹುಟ್ಟಲು ಕಾರಣವೇ ರಾಜ್‌ಕುಮಾರ್ ಅವರು. ನನ್ನ ಊರು ಹಾಸನ ಜಿಲ್ಲೆಯ ಬೇಲೂರು. ರಾಜ್ ಕುಮಾರ್ ಅವರು ನಿಧನರಾದ ದಿನಗಳಲ್ಲಿ ನಾನು ಆಗ ಊರಿನಲ್ಲಿದ್ದಾರೆ. ಅವರು ಇನ್ನಿಲ್ಲ ಅಂತ ಜನರು ದುಃಖ ಪಡುತ್ತಿದ್ದ ಹೊತ್ತಲೇ ಅವರು, ಕಣ್ಣನ್ನು ದಾನ ಮಾಡಿದ್ರಂತೆ ಅಂತ ಅಚ್ಚರಿ ವ್ಯಕ್ತಪಡಿಸುತ್ತಿದ್ರು. ಆ ಸಂಬಂಧವಾಗಿ ಸಾಕಷ್ಟು ಸುದ್ದಿಗಳು ಬಂದಿದ್ದವು. ಅದು ನನಗೆ ಒಂಥರ ಕಾಡತೊಡಗಿತು. ನೇತ್ರದಾನ ಅನ್ನೋದು ಹೇಗೆ ಇನ್ನೊಬ್ಬರ ಬದುಕಲ್ಲಿ ಬೆಳಕು ನೀಡುತ್ತದೆ ಅಂತ ಕುತೂಹಲ ಮೂಡಿಸಿತು. ಅದನ್ನೇ ಇಟ್ಟುಕೊಂಡುನಾನು ಈ ಕಥೆ ಬರೆದೆ’ ಎನ್ನುತ್ತಾರೆ.
ಈ ಸಿನಿಮಾ ವನ್ನು ಜಾಕ್ ಮಂಜು ವಿತರಣೆ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಮಂಜು, “ನನಗೆ ಸಿನಿಮಾ ಇಷ್ಟವಾಯಿತು. ಈ ಸಿನಿಮಾವನ್ನು ಹೆಚ್ಚಿನ ಜನರಿಗೆ ತೋರಿಸಬೇಕೆಂಬ ಉದ್ದೇಶದಿಂದ ಸಿನಿಮಾ ವಿತರಣೆ ಮಾಡುತ್ತಿದ್ದೇನೆ’ ಎಂದರು.