Advertisement

ಅಕ್ಷಿತ್ ಶಶಿಕುಮಾರ್‌ ಹೊಸ ಪ್ಯಾನ್ ಇಂಡಿಯಾ ಚಿತ್ರ ‘ಕಾದಾಡಿ’

04:49 PM May 22, 2023 | Team Udayavani |

ನಟ ಶಶಿಕುಮಾರ್‌ ಪುತ್ರ ಅಕ್ಷಿತ್‌ “ಕಾದಾಡಿ’ ಎನ್ನುವ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು,ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾವನ್ನು ಸತೀಶ್‌ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್‌ ಮುಖಾಂತರ ನಿರ್ಮಾಣ ಮಾಡುತ್ತಿದ್ದಾರೆ.

Advertisement

ನಾವೆಲ್ಲರೂ ಕಾದಾಡುತ್ತಾ ಒಂದು ದಿನ ಸಾಯುತ್ತೇವೆ. ಆದರೆ ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ಮಕ್ಕಳಿಗೆ ಏನಾದರೂ ಒಳ್ಳೆಯ ದಾರಿ ತೋರಿಸಬೇಕು. ನಾವು ಪ್ರತಿ ದಿನ ಹೋರಾಟದೊಂದಿಗೆ ಬದುಕುತ್ತಿದ್ದೇವೆ ಎಂಬ ಅಂಶಗಳನ್ನು ಥ್ರಿಲ್ಲರ್‌ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ.

ಲಾವಣ್ಯ ಸಾಹುಕಾರ, ಚಾಂದಿನಿ ತಮಿಳರಸನ್‌ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‌ ಮನೋಹರ್‌ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ.

ಗೋವಾ, ಚಿಕ್ಕಮಗಳೂರು, ಹೈದರಾಬಾದ್‌, ಚೆನ್ನೈ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next