ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿಅಲ್-ಖೈದಾ ಉಗ್ರ ಸಂಘಟನೆ ಕಾರ್ಯಕರ್ತನನ್ನು ಹ್ಯಾಂಡ್ ಗ್ರೆನೇಡ್‌ನೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಮಶಿತಾ ಹೌರಾ ನಿವಾಸಿ ಅಮೀರುದ್ದೀನ್ ಖಾನ್ ನನ್ನು ರಾಂಬನ್‌ನ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆತನ ವಶದಿಂದ ಚೀನದ ಹ್ಯಾಂಡ್ ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸ್ಫೋಟಕ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ರಾಂಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.