Advertisement

ಕನ್ನಡ ಸಂಭ್ರಮದ ನಡುವೆ ಕಲಬುರಗಿಯಲ್ಲಿ ಪ್ರತ್ಯೇಕತೆ ಕೂಗು; ಪ್ರತಿಭಟನೆ

12:53 PM Nov 01, 2017 | Team Udayavani |

ಕಲಬುರಗಿ:ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಕಲಬುರಗಿಯಲ್ಲಿ ಮತ್ತೆ ಪ್ರತ್ಯೇಕತೆಯ ಕೂಗು ಎದ್ದಿದೆ. ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತಾಯಿಸಿ ಪ್ರತ್ಯೇಕ ಧ್ವಜಾರೋಹಣ ನೆರವೇರಿಸಲು ಮುಂದಾದ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದ ಘಟನೆ ನಡೆದಿದೆ.

Advertisement

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಕಾರ್ಯಕರ್ತರು ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. 

ಹೈದರಾಬಾದ್ ಕರ್ನಾಟಕ ಭಾಗಕ್ಕೆ 371(ಜೆ) ಸ್ಥಾನಮಾನ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ರಾಜ್ಯದ ಸ್ಥಾನಮಾನ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next