Advertisement

ಸೇತುವೆ ಉದ್ಘಾಟನೆ-ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಜಾರಕಿಹೊಳಿ

04:21 PM Apr 29, 2020 | Naveen |

ಆಲಮಟ್ಟಿ: ಲಾಕ್‌ಡೌನ್‌ ಇದ್ದರೂ ಶಿಷ್ಟಾಚಾರ ಉಲ್ಲಂಘಿಸಿ ಮುಳವಾಡ ಏತ ನೀರಾವರಿ ಯೋಜನೆಯ ಕೂಡಗಿ ಬಳಿ ಅಂಡರ್‌ ಪಾಸ್‌ ಸೇತುವೆ ಹಾಗೂ ತಿಡಗುಂದಿ ಮೇಲ್ಸೇತುವೆ ಕಾಲುವೆಗಳ ಉದ್ಘಾಟನೆಗೆ ಕಾರಣರಾದ ಅ ಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಆಲಮಟ್ಟಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಶಿಷ್ಟಾಚಾರ ಉಲ್ಲಂಘನೆ ಆಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ತಪ್ಪು ಮಾಡಿದ ಅಧಿಕಾರಿಗಳ ವಿರುದ್ದ ಬುಧವಾರ ಸಂಜೆಯೊಳಗೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

ಆಲಮಟ್ಟಿ ಜಲಾಶಯ ಎತ್ತರಕ್ಕೆ ಚಿಂತನೆ: ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಜಲಾಶಯವನ್ನು 524.256 ಮೀಟರ್‌ ಗೆ ಎತ್ತರಿಸಲು ನ್ಯಾ| ಬ್ರಿಜೇಶಕುಮಾರ ನೇತೃತ್ವದ ಎರಡನೇ ಕೃಷ್ಣಾ ನ್ಯಾಯಾಧಿಕರಣ ಆದೇಶಿಸಿದೆ. ಆದರೆ ಇನ್ನೂ ಕೇಂದ್ರದಿಂದ ಅಧಿಸೂಚನೆಯಾಗಿಲ್ಲ (ಗೆಜೆಟ್‌) ಮತ್ತು ಜಲಾಶಯವನ್ನು ಹಂತ ಹಂತವಾಗಿ ಎತ್ತರಿಸಲು ಚಿಂತನೆ ನಡೆದಿದೆ ಎಂದರು. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಕರಣಗೊಳಿಸಲು ಮುಖ್ಯಮಂತ್ರಿ ಹಾಗೂ ಸ್ಪೀಕರ್‌ ಪರವಾನಗಿ ಪಡೆದು ಕೇಂದ್ರ ಸಚಿವರನ್ನು ಎರಡು ಬಾರಿ ಭೇಟಿಯಾಗಿ ಮನವಿ ಮಾಡಿದ್ದೇನೆ ಎಂದರು. ಮಳೆಗಾಲದಲ್ಲಿ ಹಳ್ಳ-ಕೊಳ್ಳಗಳು ಸೇರಿದಂತೆ ವಿವಿಧ ಮೂಲಗಳಿಂದ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಹೂಳು ಹರಿದು ಬರುವುದನ್ನು ತಡೆಗಟ್ಟಲು ತಾಂತ್ರಿಕ ತಜ್ಞರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜಲಾಶಯಗಳ ಮಧ್ಯದಲ್ಲಿ ಜಿಲ್ಲೆಗಳಿಗೆ ನೀರು ಹಂಚಿಕೆಯಲ್ಲಿರುವ ವ್ಯತ್ಯಾಸವನ್ನು ಸರಿಪಡಿಸಲು ಅ ಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದರು. ಸಿಎಂ ಯಡಿಯೂರಪ್ಪನವರು ನೀರಾವರಿಗೆ 10 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ. ಲಾಕ್‌ಡೌನ್‌ ತೆರವುಗೊಳಿಸಿದ ನಂತರ ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಲಿವೆ. ಸರ್ಕಾರದಲ್ಲಿ ಹಣದ ಕೊರತೆಯಿಲ್ಲ ಎಂದು ಹೇಳಿದರು.ಶಾಸಕರಾದ ಎ.ಎಸ್‌.ಪಾಟೀಲ ನಡಹಳ್ಳಿ, ಶಿವಾನಂದ ಪಾಟೀಲ, ಅರುಣ ಶಹಾಪುರ, ಹನುಮಂತ ನಿರಾಣಿ, ಎಂ.ಸಿ.ಮನಗೂಳಿ ಇತರರಿದ್ದರು.

ಜಲಾಶಯಕ್ಕೆ ಸಚಿವ ಜಾರಕಿಹೊಳಿ ಭೇಟಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಆಲಮಟ್ಟಿ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಜಲಾಶಯ ಹಾಗೂ ವಿವಿಧ ಯೋಜನೆಗಳ ಮಾಹಿತಿ ಪಡೆದರು. ಮುಖ್ಯಅಭಿಯಂತರ ಆರ್‌.ಪಿ.ಕುಲಕರ್ಣಿ ಅವರು ನೀರಿನ ಸಂಗ್ರಹ, ಗೇಟ್‌ಗಳ ನಿರ್ವಹಣೆ, ಯಾತ್ರಿ ನಿವಾಸ, ವೈರ್‌ ಕಾರ್‌ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು. ಮುಳವಾಡ ಏತನೀರಾವರಿ ಯೋಜನೆಯ ಜಾಕ್‌ವೆಲ್‌ ಗಳ ಯಂತ್ರಗಳು, ವಿದ್ಯುತ್‌ ಪರಿವರ್ತಕಗಳ ದುರಸ್ತಿ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಕಾಲುವೆಗಳಿಗೆ ನೀರು ಹರಿಯಲು ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದರು. ಆಲಮಟ್ಟಿ ಅಣೆಕಟ್ಟು ವೃತ್ತ ಅಧೀಕ್ಷಕ ಅಭಿಯಂತರ ಡಿ.ಬಸವರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರ ವಿ.ಜಿ.ಕುಲಕರ್ಣಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next