ವಿಜಯಪುರ : ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ಉದ್ಯಾನಗಳು ಅ.19 ರಿಂದ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಲಿದೆ.
ಕೋವಿಡ್ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಣೆಗೆ ಮುನ್ನವೇ ಮಾರ್ಚ್ 14 ರಿಂದ ಆಲಮಟ್ಟಿ ಶಾಸ್ತ್ರೀ ಜಲಾಶಯ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು. ಇದೀಗ ಎಲ್ಲ ಉದ್ಯಾನಗಳನ್ನು ಅ.19 ಸಾರ್ವಜನಿಕರ ಪ್ರವೇಶ, ವೀಕ್ಷಣೆಗೆ ಮುಕ್ತಗೊಳಿಸಲಾಗುತ್ತಿದೆ.
ಗುರುವಾರ ಕೃಷ್ಣಾ ಭಾಗ್ಯ ಜಲನಿಗಮದ ಆಲಮಟ್ಟಿ ವಲಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯ ಅಭಿಯಂತರ ಎಚ್.ಸುರೇಶ್, ಕಳೆದ 7 ತಿಂಗಳಿನಿಂದ ಕೋವಿಡ್ ಕಾರಣಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿತ್ತು. ಸರ್ಕಾರದ ಮಾರ್ಗಸೂಚಿ ಅನುಸರಿಸಿ ಸೋಮವಾರದಿಂದ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಆಲಮಟ್ಟಿ ಪರಿಸರ ವೀಕ್ಷಣೆಗೆ ಬರುವ ಪ್ರವಾಸಿಗರು ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂಥ ನಿಯಮಗಳನ್ನು ಕಡ್ಡಾಯ ಪಾಲನೆ ಷರತ್ತಿನೊಂದಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ ಎಂದರು.
ಇದನ್ನೂ ಓದಿ :ಯಾರತ್ತ ಗುರಿ ಅಮೆರಿಕ, ಭಾರತ:ಯುದ್ಧಕ್ಕೆ ಸಿದ್ಧತೆ ನಡೆಸಿ…ಚೀನಾ ಸೇನೆಗೆ ಅಧ್ಯಕ್ಷ ಕ್ಸಿ ಸೂಚನೆ