Advertisement
ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪವಾಗಿ ಮಳೆಯಾದ್ದರಿಂದ ವಾಡಿಕೆಯಂತೆ ಕೃಷ್ಣೆಯ ಜಲನಿ ಧಿ ತುಂಬಿತ್ತು. ಕಳೆದೊಂದು ತಿಂಗಳಿಂದ ಜಲಸಂಪನ್ಮೂಲ ಇಲಾಖೆಯ ಕೃಷ್ಣಾ ಭಾಗ್ಯ ಜಲ ನಿಗಮದ ಅ ಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದರೂ ಮುಖ್ಯಮಂತ್ರಿಗಳು ಸೆ.9ರಂದು ಆಗಮಿಸಲಿದ್ದಾರೆ ಎಂದು ಜನ ಕಾತುರದಿಂದ ಕಾಯುತ್ತಿದ್ದರು. ಆದರೆ ಸಚಿವ ಉಮೇಶ ಕತ್ತಿ ಅಕಾಲಿಕ ನಿಧನದಿಂದ ಮುಂದೂಡಲಾಗಿತ್ತು. ಇದೀಗ ಮುಖ್ಯಮಂತ್ರಿಗಳು ಶುಕ್ರವಾರ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವುದು ಖಚಿತವಾಗಿದೆ.
Related Articles
Advertisement
2018ರಲ್ಲಿ ಬಾಗಿನ ಅರ್ಪಣೆಗೆ ದಿನಾಂಕ ನಿಗದಿಯಾಗಿದ್ದರೂ ಹುಬ್ಬಳ್ಳಿಯಲ್ಲಿ ಮಳೆಯಾಗಿದ್ದರಿಂದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಹಾಗೂ ನೀರಾವರಿ ಸಚಿವರಾಗಿದ್ದ ಡಿ.ಕೆ. ಶಿವಕುಮಾರ ಬಾಗಿನ ಅರ್ಪಿಸಲು ಆಗಮಿಸುತ್ತಾರೆಂದು ವಿಜೃಂಭಣೆ ಸ್ವಾಗತಕ್ಕಾಗಿ ಇಡೀ ಪ್ರದೇಶ ಹೂವಿನಿಂದ ಅಲಂಕರಿಸಲಾಗಿತ್ತು. ಸಮಾರಂಭಕ್ಕೆ ಬಾರದೇ ಮಳೆ ನೆಪ ಹೇಳಿ ರದ್ದುಗೊಳಿಸಿದ್ದರಿಂದ ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ಸ್ವಾಮೀಜಿ ಸೇರಿ ವಿವಿಧ ಮಠಾಧಿ àಶರು, ರೈತರು ಮುಖ್ಯಮಂತ್ರಿಗಳ ನಡೆ ತೀವ್ರವಾಗಿ ಖಂಡಿಸಿದ್ದರು.
2019ರ ಅ.5ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಾಗಿನ ಅರ್ಪಿಸಿದ್ದರು. 2020 ಅ.22ರಂದು ನಿಗದಿಯಾಗಿದ್ದ ಬಾಗಿನ ಅರ್ಪಣೆ ಹವಾಮಾನ ವೈಪರೀತ್ಯದಿಂದ ನೆರೆಹಾವಳಿಗೆ ತುತ್ತಾಗಿದ್ದ ಪ್ರದೇಶ ವೀಕ್ಷಿಸಿ ಮುಖ್ಯಮಂತ್ರಿ ಬಿಎಸ್‌ವೈ ಆಲಮಟ್ಟಿಗೆ ಆಗಮಿಸಿ ಬಾಗಿನ ಅರ್ಪಿಸಲಿದ್ದಾರೆ ಎಂದು ಜಿಲ್ಲೆಯ ಶಾಸಕರು, ರೈತರು, ಮಠಾಧಿಧೀಶರು, ಅಭಿಮಾನಿಗಳು ಆಗಮಿಸಿದ್ದರು. ಆದರೆ ಸಂಜೆ 6 ಗಂಟೆ ವೇಳೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಕಾರ್ಯಕ್ರಮ ರದ್ದು ಎಂದು ಘೋಷಣೆ ಮಾಡಿದ್ದರು. ಇದರಿಂದ ಕೃಷ್ಣೆಯ ಒಡಲ ಮಕ್ಕಳಿಗೆ ನಿರಾಶೆಯಾಗುವಂತಾಗಿತ್ತು. ನಂತರ 2021ರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಗಾಪೂಜೆ ಮತ್ತು ಬಾಗಿನ ಅರ್ಪಣೆ ಮಾಡಿದ್ದರು. ರಾಜ್ಯದಲ್ಲಿ ಅತಿ ಉದ್ದವಾಗಿ ಹರಿದು ಸುಮಾರು 6.59 ಲಕ್ಷ ಎಕರೆ ಜಮೀನಿಗೆ ಹಾಗೂ 12 ಜಿಲ್ಲೆಗಳಿಗೆ ಕುಡಿವ ನೀರು ಪೂರೈಸುವ, ಜಲವಿದ್ಯುತ್ ಘಟಕಗಳಿಗೆ, ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರ ಹಾಗೂ ವಿವಿಧ ಕಾರ್ಖಾನೆಗಳಿಗೆ ಸೇರಿ ರಾಜ್ಯದ ಬಹುಭಾಗ ನೀರಿನ ದಾಹ ನೀಗಿಸುವ ಕೃಷ್ಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಲಮಟ್ಟಿಗೆ ಆಗಮಿಸಿ ಸೆ.30ರಂದು ಬಾಗಿನ ಅರ್ಪಿಸಲಿದ್ದಾರೆ.
-ಶಂಕರ ಜಲ್ಲಿ