Advertisement
ಖಾಸಗಿ ಕಂಪನಿಗಳು ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ರಜೆ ನೀಡಬೇಕು ಎಂದು ಸರ್ಕಾರ ಆದೇಶಿಸಿದರು. ಕಾರ್ಖಾನೆಯಲ್ಲಿ ಸ್ಥಳೀಯ ಕಾರ್ಮಿಕರು ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಯ ಮತ್ತು ತಮಿಳುನಾಡು, ಬಿಹಾರದ ಸುಮಾರು 200ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಮುಂಜಾಗ್ರತವಾದ ಯಾವುದೇ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗುತ್ತಿಲ್ಲ. ವಿಷಯ ತಿಳಿದು ಕಾರ್ಖಾನೆಗೆ ಆಗಮಿಸಿದ ಆಲಮೇಲ ಎಸೈ ನಿಂಗಪ್ಪ ಪೂಜಾರಿ ಅಲ್ಲಿನ ಸಂಬಂಧಿಸಿದ ಅಧಿಕಾರಿಗೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡು ಸ್ಯಾನಿಟೈಸರ್ ತಯಾರಿಸಲು ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದುಕೊಂಡಿದ್ದು, ಅದಕ್ಕೆ ಸಂಬಂಧಪಟ್ಟ ಕಾರ್ಮಿಕರನ್ನು ಹೊರತುಪಡಿಸಿ ಉಳಿದೆಲ್ಲ ಕಾರ್ಮಿಕರಿಗೆ ರಜೆ ನೀಡಿ ಎಂದು ಎಚ್ಚರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಖಾನೆ ಅಧಿಕಾರಿ ಗಂಗಾಧರ ಹುಕ್ಕೇರಿ, ಕಾರ್ಖಾನೆಯ ಬಾಯ್ಲರ್ ಕೆಲಸ ನಡೆಯುತ್ತಿದ್ದು, ಅದರ ಎಲ್ಲ ಕಾರ್ಮಿಕರು ಪ್ರತಿನಿತ್ಯ ಕೆಲಸ ಮಾಡುತ್ತಿದ್ದಾರೆ.
Advertisement
ಸಕ್ಕರೆ ಕಾರ್ಖಾನೆಯಿಂದ ಹೊರಬಂದ ಸಿಬ್ಬಂದಿ
04:18 PM Mar 25, 2020 | Naveen |
Advertisement
Udayavani is now on Telegram. Click here to join our channel and stay updated with the latest news.