Advertisement

ಮಾದಕ ವಸ್ತು ವಿರುದ್ಧ ಜಾಗೃತಿ ಅಗತ್ಯ

12:53 PM Aug 28, 2019 | Naveen |

ಆಳಂದ: ಮಾದಕ ವಸ್ತುಗಳ ದುರ್ಬಳಕೆ ವಿರುದ್ಧ ಜನಜಾಗೃತಿ ಅಗತ್ಯವಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಉಪ ಕುಲಪತಿ ಪ್ರೊ| ಎಚ್.ಎಂ. ಮಹೇಶ್ವರಯ್ಯ ಹೇಳಿದರು.

Advertisement

ತಾಲೂಕಿನ ಕಡಗಂಚಿ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಮಾಜ ಕಾರ್ಯ ವಿಭಾಗ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ದುರ್ಬಳಕೆ ತಡೆಯುವಲ್ಲಿ ಸಮಾಜ ಕಾರ್ಯ ವಿದ್ಯಾರ್ಥಿಗಳ ಸಾಮರ್ಥ್ಯ ಅಭಿವೃದ್ಧಿಗೊಳಿಸುವ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಾದಕ ವಸ್ತುಗಳ ದುರ್ಬಳಕೆ ದಿನದಿಂದ ದಿನಕ್ಕೆ ಯುವಕರಲ್ಲಿ ಏರಿಕೆ ಪ್ರಮಾಣದಲ್ಲಿ ಕಂಡುಬರುತ್ತಿದೆ. ಇದರಿಂದಾಗಿ ಸಮಾಜದಲ್ಲಿ ಹಲವಾರು ಹೊಸ ಸಮಸ್ಯೆಗಳು ಉದ್ಭವಿಸುತ್ತಿವೆ. ಇದರ ಜೊತೆಗೆ ಶಿಕ್ಷಣ ಸಂಸ್ಥೆಯಲ್ಲಿ ಯುವಕರು ಮಾದಕ ವಸ್ತುಗಳ ದುರ್ಬಳಕೆಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ಕಠಿಣ ಕ್ರಮ ಅವಶ್ಯಕ ಎಂದು ಹೇಳಿದರು.

ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹೆಚ್ಚಾಗಿ ಶಿಕ್ಷಣ ಸಂಸ್ಥೆ ಮತ್ತು ಗ್ರಾಮೀಣ ಸಮುದಾಯದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಮುದಾಯದ ಜನರಿಗೆ ಜಾಗೃತಿ ಮೂಡಿಸಬೇಕು ಎಂದು ಅವರು ಕರೆ ನೀಡಿದರು.

ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ರಾಜ್ಯ ಆರ್ಥಿಕ ನಿಗಮದ ಉಪ ವ್ಯವಸ್ಥಾಪಕ ಡಾ| ಚಂದ್ರಕಾಂತ ಚಂದಾಪುರ ಮಾತನಾಡಿ, ಮಾದಕ ವಸ್ತುಗಳು ಇಂದಿನ ಯುಗದಲ್ಲಿ ಹೇಗೆ ಯುವಕರನ್ನು ದುರ್ಬಲರನ್ನಾಗಿಸುತ್ತದೆ. ಮಾದಕ ವ್ಯಸನಕ್ಕೆ ಕಾರಣ, ವ್ಯಸನದ ಗುಣಲಕ್ಷಣ ಮತ್ತು ತಡೆಗಟ್ಟುವ ಕ್ರಮಗಳ ಕುರಿತು ವಿವರಿಸಿದರು.

Advertisement

ಗೌರವಾನಿತ್ವ ಅತಿಥಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ| ಚನ್ನವೀರ ಆರ್‌. ಎಂ. ಮಾತನಾಡಿ, ಮಾದಕ ವಸ್ತು ಎಂಬ ಸಾಮಾಜಿಕ ಪಿಡುಗನ್ನು ತಡೆಗಟ್ಟುವಲ್ಲಿ ಸಮಾಜ ಕಾರ್ಯ ವಿದ್ಯಾರ್ಥಿಗಳ ಪಾತ್ರದ ಕುರಿತು ಹೇಳಿದರು. ಕಾರ್ಯಕ್ರಮ ಸಂಯೋಜಕ ಡಾ| ಲಕ್ಷ್ಮಣ ಜಿ. ಕಾರ್ಯಾಗಾರದ ಉದ್ದೇಶ ಹಾಗೂ ಇದರಿಂದ ಸಮಾಜಕ್ಕೆ ಆಗುವ ಒಳಿತಿನ ಕುರಿತು ವಿವರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಮನೋ ವೈದ್ಯಕೀಯ ಸಮಾಜ ಕಾರ್ಯಕರ್ತ ಸುಧಿಧೀರ ಬಾಬು, ಕೇಂದ್ರೀಯ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು, ಸಂಶೋಧಕರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next