Advertisement

ಅಳ್ನಾವರ; 85 ನಾಮಪತ್ರಗಳು ಸಿಂಧು

10:30 AM May 18, 2019 | Team Udayavani |

ಅಳ್ನಾವರ: ಪಟ್ಟಣ ಪಂಚಾಯತಿ ಚುನಾವಣೆಗೆ ಸ್ಪರ್ಧೆ ಬಯಸಿ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಪಪಂ ಕಾರ್ಯಾಲಯದಲ್ಲಿ ಶುಕ್ರವಾರ ಜರುಗಿತು. ಸಲ್ಲಿಕೆಯಾಗಿದ್ದ 87 ನಾಮಪತ್ರಗಳ ಪೈಕಿ ಎರಡು ನಾಮಪತ್ರಗಳು ತಿರಸ್ಕೃತಗೊಂಡಿದ್ದು, ಇನ್ನುಳಿದ 85 ನಾಮಪತ್ರಗಳು ಸಿಂಧುವಾಗಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು ಹದಿನೆಂಟು ವಾರ್ಡ್‌ಗಳಿಗೆ ಚುನಾವಣೆ ಜರುಗುತ್ತಿದ್ದು, ಎಲ್ಲೆಡೆ ಮೂರು ಮತ್ತು ಮೂರಕ್ಕಿಂತ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿವೆ. 20ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದ್ದು, ಆ ನಂತರವಷ್ಟೇ ಸ್ಪಷ್ಟ ಚಿತ್ರಣ ತಿಳಿಯಲಿದೆ. ಮತದಾನ ಮೇ 29ರಂದು ನಡೆಯಲಿದ್ದು ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಧಾರವಾಡ ತಹಶೀಲ್ದಾರ್‌ ಪ್ರಕಾಶ ಕುದರಿ ತಿಳಿಸಿದ್ದಾರೆ. ಚುನಾವಣೆ ಸಿಬ್ಬಂದಿಯನ್ನು ಈಗಾಗಲೇ ನೇಮಕ ಮಾಡಲಾಗಿದ್ದು, ತರಬೇತಿ ನೀಡಲಾಗುತ್ತದೆ. ಮತ ಏಣಿಕೆ ಸಹ ಅಳ್ನಾವರದಲ್ಲಿಯೇ ನಡೆಯಲಿದೆ ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next