Advertisement

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

12:52 PM Sep 21, 2024 | Team Udayavani |

ಆಳಂದ್: ಕಳೆದ ಶುಕ್ರವಾರ (ಸೆ.13) ದಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಕೊಲೆ ಮಾಡಿ ತಲೆಮರಿಸಿಕೊಂಡಿದ್ದ ಮತ್ತು ಬೆಂಗಳೂರು, ಕಲಬುರಗಿ ಜಿಲ್ಲೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದ್ದ ಏನಲಾದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ.

Advertisement

ತಾಲೂಕಿನ ನಿಂಬರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಮಾಡ್ಯಾಳ್ ಮತ್ತು ಕುಲಾಲಿ ರಸ್ತೆಯ ಮಲ್ಲಯ್ಯನ ಗುಂಪ ದಾರಿಯಲ್ಲಿ ಪೊಲೀಸ್ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡೂರು ಶ್ರೀನಿವಾಸಲು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

ಕಳೆದ ಶುಕ್ರವಾರ ಆಳಂದ (Alanda) ತಾಲೂಕಿನ ಜಿಡಗಾ ಕ್ರಾಸ್​ ಬಳಿ ಗ್ರಾಮ ಪಂಚಾಯಿತು ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಲಕ್ಷ್ಮಣ ಗುಂಡೇಟು ತಿಂದ ಆರೋಪಿ. ಅಫಜಲಪುರ ಠಾಣೆ ಪಿಎಸ್ಐ ಸೋಮಲಿಂಗ ಒಡೆಯರ್ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿದ್ದ ಆರೋಪಿ ಲಕ್ಷ್ಮಣನನ್ನು ಬಂಧಿಸಲು ಹೋಗಿದ್ದಾರೆ. ಈ ವೇಳೆ ಆರೋಪಿ ಲಕ್ಷ್ಮಣ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಅಫಜಲಪುರ ಠಾಣೆ ಪಿಎಸ್ಐ ಸೋಮಲಿಂಗ ಆರೋಪಿ ಲಕ್ಷ್ಮಣ ಬಲಗಾಲಿಗೆ ಗುಂಡು ಹೊಡೆದಿದ್ದಾರೆ ಏನಲಾಗಿದೆ.

Advertisement

ಆರೋಪಿ ಲಕ್ಷ್ಮಣ ಬೆಂಗಳೂರು ಮತ್ತು ಕಲಬುರಗಿ ಜಿಲ್ಲೆಯ ವಿವಿಧಡೆ ಬಂದೂಕು ಸರಬರಾಜು ಮಾಡುತ್ತಿದ್ದ ಎಂಬ ಆರೋಪ ಇದೆ, ಈ ಹಿನ್ನೆಲೆಯಲ್ಲಿ ಅಕ್ರಮ ಶಸ್ತ್ರಾಸ್ತ ಪೂರೈಕೆ ಸೇರಿದಂತೆ ಕೊಲೆ ಆರೋಪಿ ಲಕ್ಷ್ಮಣ ಪೂಜಾರಿ ವಿರುದ್ಧ 11 ಕೇಸ್​ಗಳಿವೆ. ವಿಶ್ವನಾಥ್​ ಜಮಾದಾರ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಕ್ಷ್ಮಣ ವಿರುದ್ಧ ಆಳಂದ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ 

Advertisement

Udayavani is now on Telegram. Click here to join our channel and stay updated with the latest news.

Next