Advertisement

ಉದ್ಯೋಗ ಖಾತ್ರಿ ಕಾಮಗಾರಿ ಆರಂಭಕ್ಕೆ ಒತ್ತಾಯ

11:45 AM Feb 13, 2020 | Naveen |

ಆಳಂದ: ತಾಲೂಕಿನ ಗ್ರಾಪಂಗಳಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ಆರಂಭಿಸಿ ಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಬಸವರಾಜ ಎಸ್‌. ಕೊರಳ್ಳಿ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

Advertisement

ಪಟ್ಟಣದ ತಾಪಂ ಕಚೇರಿ ಎದುರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕಾರ್ಮಿಕರು, ಕೂಡಲೇ ಮಹಾತ್ಮ ಗಾಂಧಿ  ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಮಗಾರಿ ಆರಂಭಿಸಿ, ಕೆಲಸ ನೀಡಿ ಬದುಕಿಗೆ ಆಶ್ರಯ ಒದಗಿಸಬೇಕು ಎಂದು ಮನವಿ ಮಾಡಿದರು.

ಬಸವರಾಜ ಕೋರಳ್ಳಿ ಮಾತನಾಡಿ, ಪ್ರಸ್ತುತ ಕೃಷಿ ಚಟುವಟಿಕೆ ಮುಗಿದ್ದಿದ್ದರಿಂದ ಕಾರ್ಮಿಕರಿಗೆ ಕೆಲಸವಿಲ್ಲದೇ ದುಡಿಯಲು ವಲಸೆ ಹೋಗುವಂತಾಗಿದೆ. ಸಂಬಂಧಿತ ಅಧಿಕಾರಿಗಳಿಗೆ ಕಾಮಗಾರಿ ಆರಂಭಿಸಿ ಕಾರ್ಮಿಕರಿಗೆ ಅನುಕೂಲ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸ್ಥಳಕ್ಕೆ ಆಗಮಿಸಿದ ತಾಪಂ ಇಒ ಡಾ| ಸಂಜಯ ರೆಡ್ಡಿ ಮನವಿ ಸ್ವೀಕರಿಸಿ, ಈ ಕುರಿತು ಸಂಬಂಧಿತ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿ, ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಮೇಲೆ ಪ್ರತಿಭಟನೆ ಹಿಂಪಡೆಯಲಾಯಿತು. ಸಂಘಟನೆ ಉಪಾಧ್ಯಕ್ಷ ಗುರು ಬಂಗರಗಿ, ನಾಗರಾಜ ಘೋಡಕೆ, ರವಿ ಪಟ್ಟಣಶೆಟ್ಟಿ, ದೇವಾ ನಟರಾಜ ಸಾಲೇಗಾಂವ, ಶರಣಪ್ಪ ಕುಂಬಾರ, ಯಲ್ಲಪ್ಪ ಸೇರಿದಂತೆ ಕಾರ್ಮಿಕರು ಗ್ರಾಮಸ್ಥರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next