Advertisement

Alanda: ಗ್ರಾಮ ಪಂಚಾಯಿತಿ ಮಾಜಿ ಸದಸ್ಯನಿಗೆ ಗುಂಡಿಟ್ಟು ಕೊಂದ ದುಷ್ಕರ್ಮಿಗಳು!

09:09 PM Sep 13, 2024 | Team Udayavani |

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ವಾಗ್ದಾರಿ ರಸ್ತೆಯ ಖಾನಾಪುರ ಬಳಿ ಗುಂಡಿಕ್ಕಿ ಗ್ರಾಮ‌ ಪಂಚಾಯಿತಿ ಮಾಜಿ ಸದಸ್ಯನನ್ನು ಗುಂಡಿಕ್ಕಿ ಬರ್ಬರ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ನಡೆದಿದೆ.

Advertisement

ಹತ್ಯೆಯಾದ ವ್ಯಕ್ತಿಯನ್ನು ವಿಶ್ವನಾಥ್ ಜಮಾದಾರ (50) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿ‌ ಪರಾರಿಯಾಗಿದ್ದಾರೆ. ಹತ್ಯೆಯಾದ ವಿಶ್ವನಾಥ್‌ ಪಡುಸಾವಳಿಯಿಂದ ಆಳಂದ ಪಟ್ಟಣಕ್ಕೆ ಬೈಕ್‌ ನಲ್ಲಿ ಬರುತ್ತಿದ್ದರು. ಎದುರಿಗೆ ಮತ್ತೊಂದು ಬೈಕ್‌ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.

ಸ್ಥಳಕ್ಕೆ ಕಲಬುರಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹತ್ಯೆ ಮಾಡಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next