Advertisement

ಕೋವಿಡ್ : ಆಲ್ದೂರು ಸುತ್ತ ಹೆಚ್ಚಿದ ಆತಂಕ

01:35 PM May 21, 2020 | Naveen |

ಆಲ್ದೂರು: ಕೋವಿಡ್ ಪಾಸಿಟಿವ್‌ ಪತ್ತೆಯಾದ ಮೂಡಿಗೆರೆ ವೈದ್ಯರಿಂದ ಚಿಕಿತ್ಸೆ ಪಡೆದ ಆಲ್ದೂರಿನ ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಆತಂಕ ಮನೆ ಮಾಡಿದೆ. ಆಲ್ದೂರು ಸುತ್ತಮುತ್ತಲಿನ ಕೆಲವು ಗ್ರಾಮಗಳ ಗ್ರಾಮಸ್ಥರು ಈ ವೈದ್ಯರಿಂದ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಜನ ಆತಂಕಕ್ಕೆ ಒಳಗಾಗಿದ್ದಾರೆ.

Advertisement

ಐದಳ್ಳಿ ಗ್ರಾಮದಲ್ಲಿ ನಡೆದ ಸಮಾರಂಭವೊಂದಕ್ಕೆ ಬಂದಿದ್ದ ಮಾಕೋನಹಳ್ಳಿ ಗ್ರಾಮದ ವಕ್ತಿಯೋರ್ವ ಮೂಡಿಗೆರೆ ವೈದ್ಯರಿಂದ ಚಿಕಿತ್ಸೆ ಪಡೆದಿದ್ದು ಈ ಕಾರ್ಯಕ್ರಮದಲ್ಲಿ ಆಲ್ದೂರು, ಬನ್ನೂರು ಹಾಗೂ ಸುತ್ತಲಿನ ಗ್ರಾಮಗಳ ಜನರು ಪಾಲ್ಗೊಂಡಿದ್ದರು ಎನ್ನಲಾಗಿದೆ. ಹೊಲದಬೈಲ್‌ ಗ್ರಾಮದ ಕಾಫಿ ತೋಟವೊಂದರ ಕಾರ್ಮಿಕ ಕೆಲಸ ಮಾಡುವಾಗ ಕಾಲಿಗೆ ಪೆಟ್ಟು ಮಾಡಿಕೊಂಡು ಈ ವೈದ್ಯರ ಬಳಿ ಸೋಮವಾರವಷ್ಟೇ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವೈದ್ಯರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ ವ್ಯಕ್ತಿಗಳು ಆಲ್ದೂರು ಸುತ್ತಮುತ್ತ ಎಷ್ಟು ಜನರ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ ಸಧ್ಯ ನಿಗೂಢವಾಗಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಆಲ್ದೂರು ಸುತ್ತಮುತ್ತಲಿನ ಗ್ರಾಮಗಳ ಜನರು ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದರೂ ಮಾಹಿತಿ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಚಿಕಿತ್ಸೆ ಪಡೆದವರು ಭಯ ಬಿಟ್ಟು ಸ್ಥಳೀಯ ವೈದ್ಯಾಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಟಾಸ್ಕ್  ಫೋರ್ಸ್‌ ಸಮಿತಿ ಸದಸ್ಯರಿಗೆ ಮಾಹಿತಿ ನೀಡಬೇಕು. ಮೂಡಿಗೆರೆ ವೈದ್ಯರಿಂದ ಚಿಕಿತ್ಸೆ ಪಡೆದಿದ್ದ ಆಗಳ ಗ್ರಾಮದ 3 ಜನ ಹಾಗೂ ಐದಳ್ಳಿ ಗ್ರಾಮದ 3 ಜನ ಸೇರಿ ಒಟ್ಟು 6 ಜನರನ್ನು ಮೂಡಿಗೆರೆ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗಿದೆ ಎಂದು ಆಲ್ದೂರು ಸರ್ಕಾರಿ ಆಸ್ಪತ್ರೆ ವೈದ್ಯ ಡಾ| ಚಾಲುಕ್ಯ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next