Advertisement

ಕೇರಳ-ಕರ್ನಾಟಕ ಗಡಿ ಭಾಗದಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆ ಬಗ್ಗೆ ನಿಗಾ : ಸಚಿವ ಬೊಮ್ಮಾಯಿ

01:28 AM Jul 06, 2021 | Team Udayavani |

ಬೆಂಗಳೂರು : ಕೇರಳ-ಕರ್ನಾಟಕ ಗಡಿ ಭಾಗದಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆ ಮೇಲೆ ನಿರಂತರವಾಗಿ ನಿಗಾ ಇರಿಸಿದ್ದೇವೆ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇರಳ ಗಡಿ ಭಾಗದಲ್ಲಿ ಸ್ಯಾಟಲೈಟ್‌ ಫೋನ್‌ಗಳ ಬಳಕೆ ಆಗಾಗ ಕಂಡುಬರುತ್ತಿದೆ. ಈ ಬಗ್ಗೆ ಇಲಾಖೆ ನಿರಂತರ ನಿಗಾ ಇರಿಸಿದೆ. ಕೆಲವು ಪ್ರದೇಶಗಳಲ್ಲಿ, ವಿಶೇಷವಾಗಿ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಅಕ್ರಮ ಅರಣ್ಯ ಸಂಪತ್ತು ಸಾಗಾಟವನ್ನು ಪತ್ತೆ ಮಾಡಿ ಕ್ರಮ ಕೈಗೊಂಡಿದ್ದೇವೆ ಎಂದರು. “ಉದಯವಾಣಿ’ ಸೋಮವಾರ ಈ ಸಂಬಂಧ ವಿಶೇಷ ವರದಿ ಪ್ರಕಟಿಸಿತ್ತು.

ಕೇರಳ-ಕರ್ನಾಟಕ ಗಡಿಭಾಗದಲ್ಲಿ ರಾಜ್ಯ ಗುಪ್ತಚರ, ಆಂತರಿಕ ಭದ್ರತ ದಳ (ಐಎಸ್‌ ಡಿ)ದ ಅಧಿಕಾರಿಗಳು ಬೀಡುಬಿಟ್ಟಿದ್ದು, ಸ್ಯಾಟ್‌ಲೈಟ್‌ ಫೋನ್‌ ಗಳು ಕಾರ್ಯಾಚರಣೆ ನಡೆಸಿದ ಕೆಲವು ಸ್ಥಳಗಳ ಲೋಕೇಶನ್‌ ಪತ್ತೆ ಹಚ್ಚಿದ್ದಾರೆ. ಕೇರಳದಿಂದ ಬಂದು ಗ್ರಾಮಾಂತರ ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳ ಮೇಲೆ ಹೆಚ್ಚಿನ ನಿಗಾ ಇರಿಸುತ್ತಿದ್ದು, ಅವರ ಪೂರ್ವಾಪರ ಮಾಹಿತಿ ಸಂಗ್ರಹಿಸುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next