Advertisement
ಉಡುಪಿ: ಜಿಲ್ಲಾದ್ಯಂತ ಸೋಮವಾರ ಬಿಸಿಲು ಮೋಡ ಕವಿದ ವಾತಾವರಣದ ನಡುವೆ ಸಾಧಾರಣ ಮಳೆಯಾಗಿದೆ. ಉಡುಪಿ, ಬೈಂದೂರು, ಕಾಪು, ಬ್ರಹ್ಮಾವರ, ಕಾರ್ಕಳ, ಕುಂದಾಪುರ ಭಾಗದಲ್ಲಿ ಬಿಟ್ಟುಬಿಟ್ಟು ಮಳೆ ಸುರಿದಿದೆ. ರವಿವಾರ ತಡರಾತ್ರಿ ಮಣಿಪಾಲ, ಉಡುಪಿ ಸುತ್ತಮುತ್ತ ಸ್ವಲ್ಪ ಹೊತ್ತು ಉತ್ತಮ ಮಳೆ ಸುರಿದಿದೆ.
ಮಂಗಳವಾರಕ್ಕೆ ಕರಾವಳಿಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು, ಸದ್ಯ ಬುಧವಾರದಿಂದ ಯಾವುದೇ ಅಲರ್ಟ್ ಇಲ್ಲ. ಸಮುದ್ರದಲ್ಲಿ ಗಂಟೆಗೆ 35-45 ಕಿ.ಮೀ. ನಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 24.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.