Advertisement

ಆ್ಯರೋನ್ ಫಿಂಚ್ ಗೆ ಗಾಯ: ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಅಲೆಕ್ಸ್ ಕ್ಯಾರಿಗೆ ನಾಯಕತ್ವ

09:42 AM Jul 20, 2021 | Team Udayavani |

ಸೈಂಟ್ ಲೂಸಿಯಾ: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡಕ್ಕೆ ವಿಕೆಟ್ ಕೀಪರ್ ಬ್ಯಾಟ್ಸಮನ್ ಅಲೆಕ್ಸ್ ಕ್ಯಾರಿ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ನಾಯಕ ಆ್ಯರೋನ್ ಫಿಂಚ್ ಅವರು ಗಾಯಗೊಂಡ ಕಾರಣ ಕ್ಯಾರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ.

Advertisement

ಆಸೀಸ್ ತಂಡಕ್ಕೆ ನಾಯಕತ್ವ ವಹಿಸಿದ ನಾಲ್ಕನೇ ವಿಕೆಟ್ ಕೀಪರ್ ಆಗಿ ಅಲೆಕ್ಸ್ ಕ್ಯಾರಿ ನೇಮಕವಾಗಿದ್ದಾರೆ. ಈ ಹಿಂದೆ ಆ್ಯಡಂ ಗಿಲ್ ಕ್ರಿಸ್ಟ್, ಇಯಾನ್ ಹೀಲಿ ಮತ್ತು ಟಿಮ್ ಪೇನ್ ಆಸೀಸ್ ತಂಡವನ್ನು ಮುನ್ನಡೆಸಿದ್ದಾರೆ.

ಇದನ್ನೂ ಓದಿ:ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸುವುದು ಅತ್ಯಂತ ಗೌರವದ ವಿಚಾರ. ಫಿಂಚ್ ಗುಣಮುಖರಾಗುವ ತನಕ ಆಸೀಸ್ ತಂಡವನ್ನು ಮುನ್ನಡೆಸುತ್ತೇನೆ ಎಂದು ಕ್ಯಾರಿ ಹೇಳಿದ್ದಾರೆ.

ಟಿ20 ಸರಣಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಸೀಸ್ ಸೋಲನುಭವಿಸಿದೆ. 4-1 ಅಂತರದಿಂದ ಆಸೀಸ್ ಸೋಲನುಭವಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next