Advertisement

ಅಲೆಕ್ಸಾಂಡರ್‌ ಮನವೊಲಿಕೆ ಯಶಸ್ವಿ

06:13 PM Apr 08, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕ್ರೈಸ್ತ ಸಮುದಾಯಕ್ಕೆ ಟಿಕೆಟ್‌ ನೀಡದ ಹಿನ್ನೆಲೆಯಲ್ಲಿ ಬೇಸರಗೊಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದ ಮಾಜಿ ಸಚಿವ ಜೆ.ಅಲೆಕ್ಸಾಂಡರ್‌ ಅವರ ಮನವೊಲಿಸುವಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಯಶಸ್ವಿಯಾಗಿದ್ದಾರೆ.

Advertisement

ಭಾನುವಾರ ಬೆಂಗಳೂರಿಗೆ ಆಗಮಿಸಿದ್ದ ಕೆ.ಸಿ.ವೇಣುಗೋಪಾಲ್‌, ಸಚಿವರಾದ ಕೆ.ಜೆ.ಜಾರ್ಜ್‌, ಡಿ.ಕೆ.ಶಿವಕುಮಾರ್‌ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್‌ ಅವರೊಂದಿಗೆ ಅಲೆಕ್ಸಾಂಡರ್‌ ಅವರ ನಿವಾಸಕ್ಕೆ ತೆರಳಿ ಪಕ್ಷದಲ್ಲಿ ಮುಂದುವರಿಯುವಂತೆ ಮನವಿ ಮಾಡಿದ್ದಾರೆ.

ಅಗತ್ಯ ಸಂದರ್ಭಗಳಲ್ಲಿ ಕ್ರಿಶ್ಚಿಯನ್‌ ಸಮುದಾಯಕ್ಕೆ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡಲಾಗಿದೆ. ಮುಂದೆಯೂ ಪಕ್ಷದಲ್ಲಿ ಕ್ರಿಶ್ಚಿಯನ್‌ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಕೊಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಲೆಕ್ಸಾಂಡರ್‌ ಪಕ್ಷದಲ್ಲಿಯೇ ಮುಂದುವರಿಯುವ ನಿರ್ಧಾರಕ್ಕೆ ಬಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next