Advertisement
ಬಳಿಕ ಮಾತನಾಡಿದ ಅವರು, ನಿರ್ದಿಷ್ಟ ಗುರಿ ಹಾಗೂ ಪರಿಶ್ರಮದಿಂದ ಕ್ರೀಡೆಯಲ್ಲಿ ಸಾಧನೆ ಮಾಡಬಹುದು. 20 ವರ್ಷಗಳ ಉತ್ತಮ ಸಾಧನಾ ಪಥ ಹೊಂದಿರುವ ಮೂಡಬಿದಿರೆ ತಾಲೂಕಿನಲ್ಲೆ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ಸರಕಾರಿ ಹೈಸ್ಕೂಲ್ ಎಂಬ ಹೆಗ್ಗಳಿಕೆಯಿರುವ ಇಲ್ಲಿಗೆ ಪದವಿಪೂರ್ವ ಕಾಲೇಜು ಬೇಡಿಕೆಗೆ ತಕ್ಕಂತೆ ಶಾಸಕರು ನಡೆಸುತ್ತಿರುವ ಪ್ರಯತ್ನವನ್ನು ಬೆಂಬಲಿಸಿ, ತಾವು ಮತ್ತು ಶಾಸಕರು ಜತೆಯಾಗಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಒತ್ತಡ ಹೇರುವುದಾಗಿ ತಿಳಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿ, ಗ್ರಾಮೀಣ ಪ್ರದೇಶದಲ್ಲಿರುವ ಅಳಿಯೂರು ಸರಕಾರಿ ಹೈಸ್ಕೂಲ್ ನಲ್ಲಿ ರಾಜ್ಯಮಟ್ಟದ ಬಾಲ್‌ಬ್ಯಾಡ್ಮಿಂಟನ್ ಪಂದ್ಯಾಟ ನಡೆಸಲು ಸಾಧ್ಯವಾಗಿದ್ದರೆ ಅದಕ್ಕೆ ಊರವರು, ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರ ಸಹಕಾರ ಕಾರಣ ಎಂದರು. ಜಿ.ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡಬಿದಿರೆ ಸಹಯೋಗದಲ್ಲಿ ಅಳಿಯೂರು ಸರಕಾರಿ ಪ್ರೌಢಶಾಲೆಯ ಆತಿಥೇಯತ್ವದಲ್ಲಿ ನಡೆದ ಪಂದ್ಯಾಟದ ಉದ್ಘಾಟನೆಯಲ್ಲಿ ಮಾಜಿ ಸಚಿವ ಅಮರನಾಥ ಶೆಟ್ಟಿ, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿ.ಪಂ. ಸದಸ್ಯೆ ಸುಜಾತಾ, ವಾಲ್ಪಾಡಿ ಗ್ರಾ.ಪಂ.ಅಧ್ಯಕ್ಷೆ ವಸಂತಿ, ತಾ.ಪಂ.ಸದಸ್ಯ ನಾಗವೇಣಿ, ಮಜಲೋಡಿ ಗುತ್ತು ಪ್ರಕಾಶ್ ಶೆಟ್ಟಿ, ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ವಿಶ್ವನಾಥ ಸಾಲ್ಯಾನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಅಳಿಯೂರು, ಮುಖ್ಯೋಪಾಧ್ಯಾಯಿನಿ ರೋಸಾ ವಿ.ಜೆ., ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ದೈಹಿಕ ಶಿಕ್ಷಣ ಶಿಕ್ಷಕ ವಸಂತ ಜೋಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ರಾಮಕೃಷ್ಣ ಶಿರೂರು, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ ಉಪಸ್ಥಿತರಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೈ.ಶಿವರಾಮಯ್ಯ ಸ್ವಾಗತಿಸಿದರು. ನವೀನ್ ಅಂಬೂರಿ ಕಾರ್ಯ ಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ವಂದಿಸಿದರು.