Advertisement
ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ನಮ್ಮಪಕ್ಷದ ಹಿರಿಯ ಮುಖಂಡರು ಮತ್ತೆ ತಮ್ಮ ಸ್ವಂತ ಮನೆಗೆ ಹನುಮಂತಪ್ಪ ಬರುತ್ತಿದ್ದಾರೆ. ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ಜೆಡಿಎಸ್ ಗೆ ಮನೆಗೆ ಬರಲು ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಅವರ ಶಕ್ತಿ ಬಳಸಿಕೊಳ್ಳುವ ಕೆಲಸ ಮಾಡಲಿಲ್ಲ ಎಂದರು.
Related Articles
Advertisement
ಸೋಮಣ್ಣ ವಿರುದ್ಧ ಕಿಡಿಜೆಡಿಎಸ್ ಅಭ್ಯರ್ಥಿಗೆ ಆಮಿಷ ಇದ್ದಿರುವ ಸಚಿವ ಸೋಮಣ್ಣ ವೈಖರಿ ಬಗ್ಗೆ ಕಟುವಾಗಿ ಟೀಕಿಸಿದ ಕುಮಾರಸ್ವಾಮಿ, ಸೋಮಣ್ಣ ಅವರ ಭಾಷೆ ನಮಗೆ ಗೊತ್ತಿಲ್ಲ. ಗೂಟದ ಕಾರು ಅಂದರೆ ಏನು? ಪ್ರವೈಟ್ ಕಾರ್ ತಗೊಂಡು ಗೂಟಾ ಇಟ್ಟುಕೊಡ್ತಾರಾ? ಕಾಂಗ್ರೆಸ್ ನಾಯಕರು ನೋಡಿದರೆ ಬಿಜೆಪಿ ಶವಯಾತ್ರೆ ಅಂತಾರೆ. ಇವರು ನೋಡಿದ್ರೆ ಗೂಟದ ಕಾರ್ ಅಂತಾರೆ. ಇವರು ಯಾವ ಗೂಟದ ಕಾರ್ ಕೊಡ್ತಾರೆ ಅಂತ ಗೊತ್ತಿಲ್ಲ. ಇವೆಲ್ಲ ಈಗ ವರ್ಕ್ ಆಗೊಲ್ಲ. ಸೋಮಣ್ಣ ಬಳಸಿದ ಭಾಷೆ ನಮಗೆ ಗೊತ್ತಿಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಆತಂಕ ಶುರುವಾಗಿದೆ. ಅವರ ಇವತ್ತಿನ ಸ್ಥಿತಿ ನೋಡಿದರೆ ನಮಗೆ ಅರ್ಥ ಆಗುತ್ತದೆ. ಜೆಡಿಎಸ್ ಈ ಬಾರಿ ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದರು. ಸಮೀಕ್ಷೆಗಳಿಗೆ ಟಾಂಗ್
ಬಹುಮತದ ಗುರಿ ಮುಟ್ಟಲು ನಮಗೆ ಸ್ವಲ್ಪ ಆರ್ಥಿಕ ಸಮಸ್ಯೆ ಇದೆ. ಆದರೂ ನಮಗೆ ಜನತೆ ಬೆಂಬಲ ದಲ್ಲಿ ನಂಬಿಕೆ ಇದೆ. 123 ಗುರಿ ನಾವು ತಲುಪುತ್ತೇವೆ. ನಾವು ಯಾರಿಗೂ ಹಣ ಕೊಟ್ಟು ಸರ್ವೆ ಮಾಡಿಸಿಲ್ಲ. ಅದರ ಅವಶ್ಯಕತೆ ನಮಗೆ ಇಲ್ಲ. ಜನರ ಬೆಂಬಲದ ಆಧಾರದಲ್ಲಿ ನಾವು ಬಹುಮತ ಬರುತ್ತೆ ಅಂತ ಹೇಳುತ್ತಿದ್ದೇವೆ. ಕೆಲವು ಖಾಸಗಿ ವಾಹಿನಿಗಳು 23- 24 ಅಂತ ತೋರಿಸ್ತಿದ್ದಾರೆ. ಪಾಪ ಅವರು 1 ಅಂಕಿ ಮುಂದೆ ಹಾಕೋದು ಮರೆತು ಹೋಗಿದ್ದಾರೆ. ಜೆಡಿಎಸ್ ಗೆ 123 ಸ್ಥಾನ ಈ ಬಾರಿ ಬರಲಿದೆ ಎಂದರು. “ಸಿ” ಓಟರ್ ಕಾಂಗ್ರೆಸ್ ಪಕ್ಷ ಸಮೀಕ್ಷೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು; ಅವರ ಸಮೀಕ್ಷೆ ನಿಜ ಆಗಲ್ಲ. 150 ಸ್ಥಾನ ಕಾಂಗ್ರೆಸ್ ಗೆ ಬರುತ್ತೆ, ರಕ್ತದಲ್ಲಿ ಬರೆದುಕೊಡ್ತೀನಿ ಎಂಬ ಡಿಕೆ ಶಿವಕುಮಾರ್ ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇನೆ. ಡಿ.ಕೆ.ಶಿವಕುಮಾರ್ ರಕ್ತದಲ್ಲಿ ಬರೆದು ಕೊಡೋದು ಬೇಡ. ಪಾಪ, ಅವರಿಗೆ ರಕ್ತದ ಕೊರತೆ ಆಗುತ್ತದೆ ಎಂದು ಟಾಂಗ್ ನೀಡಿದರು. ಯಡಿಯೂರಪ್ಪ ಅವರು ನೋಡಿದರೆ ಜಗದೀಶ್ ಶೆಟ್ಟರ್ ಸೋಲುತ್ತಾರೆ ಅಂತ ರಕ್ತದಲ್ಲಿ ಬರೆದು ಕೊಡುತ್ತೇನೆ ಅಂತಾರೆ. ಯಾವ ನಾಯಕರು ರಕ್ತದ ಕೊರತೆ ಮಾಡಿಕೊಳ್ಳೋದು ಬೇಡ. ನೀವು ರಕ್ತದ ಕೊರತೆ ಮಾಡಿಕೊಳ್ಳೋದು ಅಗತ್ಯ ಇಲ್ಲ. ಯಾರೂ ರಕ್ತದಲ್ಲಿ ಬರೆದು ಕೊಡೋದು ಬೇಡ. ನೀವು ಹೇಳೋದು, ರಕ್ತದಲ್ಲಿ ಬರೆದು ಕೊಡೋದು ಮುಖ್ಯ ಅಲ್ಲ. ಜನರು ಮತ ಕೊಡೋದು ಮುಖ್ಯ. ಕಾಂಗ್ರೆಸ್, ಬಿಜೆಪಿ ನಾಯಕರು ಯಾವ ಆಧಾರದಲ್ಲಿ 150 ಸ್ಥಾನ ಅಂತಾರೆ ಹೇಳಲಿ ಎಂದು ಪ್ರಶ್ನಿಸಿದರು. ನೀವು ನನ್ನನ್ನು ಕೇಳಬಹುದು, 123 ಕ್ಷೇತ್ರ ಹೇಗೆ ಬರುತ್ತದೆ ಅಂತ. ನಾನು 106 ಕ್ಷೇತ್ರಗಳಲ್ಲಿ ನೇರವಾಗಿ ಜನರ ಭೇಟಿ ಮಾಡಿದ್ದೇನೆ. ನಿತ್ಯ ಒಂದೊಂದು ಕ್ಷೇತ್ರದಲ್ಲಿ 50-60 ಹಳ್ಳಿ ಸುತ್ತಿದ್ದೇನೆ. ಜನರ ಸಂಪರ್ಕದಲ್ಲಿ ಮಾಡಿದ್ದೇನೆ. ಪಂಚರತ್ನ, ಜನತಾ ಜಲಧಾರೆ ಯಾತ್ರೆಗಳು ಯಶಸ್ವಿಯಾಗಿವೆ. ನನ್ನ ರೋಡ್ ಶೋಗೆ ಉತ್ತಮ ಜನ ಸ್ಪಂದನೆ ಸಿಕ್ಕಿದೆ. ದೇವನಹಳ್ಳಿಯಲ್ಲಿ ಜನ ಇಲ್ಲ ಅಂತ ಅಮಿತ್ ಶಾ ರೋಡ್ ಶೋ ಕ್ಯಾನ್ಸಲ್ ಆಯ್ತು. ಆದರೆ ನಮಗೆ ಜನರೇ ಆಶೀರ್ವಾದ ಮಾಡ್ತಾರೆ ಎಂದರು.