Advertisement

ಹೊಸ ವರ್ಷಕ್ಕೆ ಮುನ್ನ ಎಲ್ಲಾ ಕಡತ ವಿಲೇವಾರಿ ಮಾಡಿದ ಡಿಸಿಎಂ

08:23 PM Jan 01, 2021 | Team Udayavani |

ಬೆಂಗಳೂರು: ಉನ್ನತ ಶಿಕ್ಷಣ ಖಾತೆಯನ್ನು ಹೊಂದಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೊಸ ವರ್ಷಕ್ಕೆ ಮುನ್ನಾ ದಿನವಾದ ಗುರುವಾರ ತಮ್ಮ ಮುಂದೆ ಇದ್ದ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಿದ್ದಾರೆ.

Advertisement

ಈ ಮೂಲಕ ಅವರು 2020 ವರ್ಷವನ್ನು ಮುಕ್ತಾಯಗೊಳಿಸಿ ಒಂದು ಅರ್ಥಪೂರ್ಣ ಸಂಪ್ರದಾಯಕ್ಕೆ ನಾಂದಿ ಹಾಡಿದರಲ್ಲದೆ, ರಾತ್ರಿ 9 ಗಂಟೆವರೆಗೂ ಗೃಹ ಕಚೇರಿಯಲ್ಲೇ ಕೂತು ಬಾಕಿ ಇದ್ದ ಸುಮಾರು 40 ಕಡತ ವಿಲೇವಾರಿ ಮಾಡುವುದರ ಮೂಲಕ ಹೊಸ ವರ್ಷಾಚರಿಸಿದರು.

2021 ವರ್ಷವನ್ನು ಇ-ಆಫೀಸ್‌ ವ್ಯವಸ್ಥೆಯ ಮೂಲಕ ನೂತನ ಆರಂಭಕ್ಕೆ ಎದುರು ನೋಡುತ್ತಿದ್ದೇನೆ. ಜನಪರ ಕಾರ್ಯಗಳ ಅನುಷ್ಠಾನಕ್ಕೆ ಈ ರೀತಿಯಲ್ಲಿ ಕ್ಷಿಪ್ರ ಮತ್ತು ಪಾರದರ್ಶಕವಾಗಿ ಕೆಲಸ ಮಾಡಲು ಸದಾ ಬದ್ಧನಾಗಿದ್ದೇನೆ. ಇವತ್ತಿನವರೆಗೆ ಇದ್ದ ಎಲ್ಲಾ ಕಡತ ವಿಲೇವಾರಿ ಮಾಡಿದ್ದು, ನನ್ನ ವ್ಯಾಪ್ತಿಯ ಯಾವುದೇ ಇಲಾಖೆಯಲ್ಲಿ ಯಾವ ಕಡತವೂ ಬಾಕಿ ಬಿದ್ದಿಲ್ಲ. ಇದರಿಂದ ನನ್ನ ಕರ್ತವ್ಯದ ಬಗ್ಗೆ ಸಂಪೂರ್ಣತೆಯ ಭಾವ ಬಂದಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

ಈಗಾಗಲೇ ಉನ್ನತ ಶಿಕ್ಷಣ ಇಲಾಖೆ ಸಂಪೂರ್ಣವಾಗಿ ಇ-ಆಫೀಸ್‌ ಮೂಲಕವೇ ನಡೆಯುತ್ತಿದೆ. ಹೊಸ ವರ್ಷದ ಮೊದಲ ದಿನದಿಂದ ಎಲ್ಲಾ ವಿಶ್ವವಿದ್ಯಾಲಯಗಳ ವ್ಯವಹಾರಗಳು ಸಂಪೂರ್ಣವಾಗಿ ಇ-ಆಫೀಸ್‌ ಮೂಲಕವೇ ನಡೆಯುತ್ತವೆ. ಎಲ್ಲಾ ಕಡತ ಮತ್ತು ಪತ್ರಗಳು ಇ-ಆಫೀಸ್‌ ಮೂಲಕವೇ ನಡೆಯಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next