ವಾಷಿಂಗ್ಟನ್ : ವಿಮಾನಯಾನ ನಿಯಂತ್ರಣ ಸಂಸ್ಥೆಯ ಕಂಪ್ಯೂಟರಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಅಮೆರಿಕದಾದ್ಯಂತ ನೂರಾರು ವಿಮಾನಗಳು ಹಾರಾಟ ಸ್ಥಗಿತಗೊಳಿಸಿವೆ ಎಂದು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (ಎಫ್‌ಎಎ) ಹೇಳಿದೆ.
ತಾಂತ್ರಿಕ ಸಮಸ್ಯೆಯಿಂದಾಗಿ ಸುಮಾರು ಸಾವಿರಾರು ವಿಮಾನಗಳ ಹಾರಾಟದ ಸಮಯದಲ್ಲಿ ವ್ಯತ್ಯಾಸವುಂಟಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಇದಕ್ಕೆ ಸ್ಪಷ್ಟನೆ ನೀಡಿದ ವಿಮಾನಯಾನ ಸಂಸ್ಥೆ ಪ್ರಯಾಣಿಕರು ಹೆದರುವ ಅಗತ್ಯವಿಲ್ಲ, ಕಂಪ್ಯೂಟರಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ ಸುಮಾರು ನಾಲ್ಕು ನೂರು ವಿಮಾನಗಳು ತಮ್ಮ ಹಾರಾಟವನ್ನು ಮೊಟಕುಗೊಳಿಸಿದರೆ ತಾಂತ್ರಿಕ ದೋಷ ಸರಿಪಡಿಸಲು ಕಾಲಾವಕಾಶ ಬೇಕಾಗಿರುವುದರಿಂದ ಸುಮಾರು ೧೦೦೦ ವಿಮಾನಗಳ ಹಾರಾಟದಲ್ಲಿ ವ್ಯತ್ಯವವುಂಟಾಗಿದೆ ಎಂದು ಹೇಳಿದೆ.
ಇದನ್ನೂ ಓದಿ: ಎಲ್ ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಗೆ ಬೆದರಿಕೆ?: ಕೇಂದ್ರದಿಂದ ಝಡ್ ಕೆಟಗರಿ ಭದ್ರತೆ