Advertisement

ಅಖಿಲ ಭಾರತ ವೀರಶೈವ ಮಹಾಸಭಾ ಸಂತಾಪ

12:00 PM Nov 13, 2018 | Team Udayavani |

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್‌ ನಿಧನಕ್ಕೆ ಅಖಿಲಭಾರತ ವೀರಶೈವ ಮಹಾಸಭಾ ಸಂತಾಪ ಸೂಚಿಸಿದೆ. ಸಂಸತ್ತಿನಲ್ಲಿ ಬಸವಣ್ಣನ ಪ್ರತಿಮೆ ಅನಾವರಣಗೊಳಿಸುವಲ್ಲಿ ಮತ್ತು ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಸ್ಥಾನ ಮಾನ ದೊರಕಿಸಿಕೊಡುವಲ್ಲಿ ಅನಂತಕುಮಾರ್‌ ಮಹತ್ವದ ಪಾತ್ರ ವಹಿಸಿದ್ದರು ಎಂದು ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವ ಶಂಕರಪ್ಪ, ರಾಜ್ಯಾಧ್ಯಕ್ಷ ಎನ್‌.ತಿಪ್ಪಣ್ಣ, ಯುವ ಘಟಕದ ಅಧ್ಯಕ್ಷ ಉಮೇಶ್‌ ಪಾಟೀಲ್‌ ಬಣ್ಣಿಸಿದ್ದಾರೆ.

Advertisement

ವಿದ್ಯಾರ್ಥಿಯಾಗಿದ್ದಾಗಲೇ ಎಬಿವಿಪಿ ಕಾರ್ಯಕರ್ತರಾಗಿ ತಮ್ಮ ಸಾರ್ವಜನಿಕ ಜೀವನ ಆರಂಭಿಸಿ, ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅಪಾರ ಬಂಧು ಬಳಗ ಹಾಗೂ ಅಭಿಮಾನಿಗಳನ್ನು ಅಗಲಿರುವ ಅವರ ಆತ್ಮಕ್ಕೆ ದೇವರು ಶಾಂತಿ ನೀಡಲು ಹಾಗೂ ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಖವನ್ನು  ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next