Advertisement

ಎಲ್ಲ ಭಾರತೀಯರು ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಬೇಕು : ಸಚಿವ ಜಗದೀಶ್ ಶೆಟ್ಟರ್

11:01 AM Jan 26, 2020 | Suhan S |

ಬೆಳಗಾವಿ: ರಾಷ್ಟ್ರದ ಅಭಿವೃದ್ಧಿಗೆ ಪೌರತ್ವ ತಿದ್ದುಪಡಿ ಕಾಯ್ದೆಯು ಪೂರಕವಾಗಿದೆ. ಈ ಕಾಯ್ದೆಯು ಯಾರ ಪೌರತ್ವ ‌ಕಿತ್ತುಕೊಳ್ಳುವುದಿಲ್ಲ, ಇದು ಪೌರತ್ವ ನೀಡುವ ಕಾಯ್ದೆಯಾಗಿದೆ. ಹೀಗಾಗಿ ಎಲ್ಲ ಭಾರತೀಯರು ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ  ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮನವಿ ಮಾಡಿದರು.

Advertisement

ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ಪೌರತ್ವ ಕಾಯ್ದೆ ಜಾರಿಯಿಂದ ಗಣರಾಜ್ಯೋತ್ಸವ ಮತ್ತಷ್ಟು ಅರ್ಥಪೂರ್ಣವಾಗುತ್ತದೆ ಎಂದು ಹೇಳಿದರು.ಇತ್ತೀಚೆಗೆ ವಿನಾಕಾರಣ ಗಡಿ ವಿಷಯ ಕೆಣಕುವ ಪ್ರಯತ್ನ ನಡೆದಿದೆ. ಇಲ್ಲಿನ ಜನರು ಯಾವುದೇ ಪ್ರಚೋದನೆಗೆ ಒಳಗಾಗದೇ ಎಲ್ಲರೂ ಸೌಹಾರ್ದದಿಂದ ಇರಬೇಕು ಎಂದು ಸಚಿವ ಶೆಟ್ಟರ್ ಹೇಳಿದರು.

ಗಡಿ ವಿವಾದ ಮುಗಿದ ಅಧ್ಯಾಯ. ಬೆಳಗಾವಿ ನಮ್ಮದು. ಕರ್ನಾಟಕದ ಅವಿಭಾಜ್ಯ ಅಂಗ ಎಂದು ಈಗಾಗಲೇ ಸಾರಿ ಸಾರಿ ಹೇಳಿದ್ದೇವೆ. ಇದನ್ನು ಮತ್ತೆ ಕೆಣಕುವ ಪ್ರಯತ್ನ ಮಾಡಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next