Advertisement

ನೆರೆಹಾನಿ: ಇಡೀ ರಾಜ್ಯ ಸರ್ಕಾರ ರಸ್ತೆಗಿಳಿದು ಕೆಲಸ ಮಾಡುತ್ತಿದೆ ಎಂದ ಸಿಎಂ ಬೊಮ್ಮಾಯಿ

11:15 AM Jul 12, 2022 | Team Udayavani |

ಮೈಸೂರು: ರಾಜ್ಯದ ಹಲವೆಡೆ ಪ್ರವಾಹ ಬಂದು ಆಸ್ತಿಪಾಸ್ತಿ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ರಾಜ್ಯ ಸರ್ಕಾರ ರಸ್ತೆಗಿಳಿದು ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ತಮ್ಮ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ನೆರೆ ಹಾನಿ ಪ್ರದೇಶಕ್ಕೆ ಹೋಗುತ್ತಿಲ್ಲವೆನ್ನುವುದು ಸುಳ್ಳು. ನನ್ನ ಆದಿಯಾಗಿ ಎಲ್ಲಾ ಸಚಿವರುಗಳು ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಮೈಸೂರಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ಸಂಜೆಯೊಳಗೆ ಮೊದಲ ಹಂತದ ನಷ್ಟದ ಅಧಿಕೃತ ಅಂಕಿ ಅಂಶ ಬಿಡುಗಡೆ ಮಾಡುತ್ತೇವೆ. ನಷ್ಟದ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದಲ್ಲಿ ತೀರ್ಮಾನ ಮಾಡುತ್ತೇವೆ. ಸದ್ಯಕ್ಕೆ 750 ಕೋಟಿ ರೂಪಾಯಿ ಎನ್ ಡಿಆರ್ ಎಫ್ ಹಣ ನಮ್ಮಲ್ಲಿ ಇದೆ. ಅನೇಕ ಕಡೆಗಳಲ್ಲಿ ಭೂ ಕುಸಿತವಾಗಿದೆ. ರಸ್ತೆಗಳು ಹಾಳಾಗಿದೆ, ಮನೆ ಹಾನಿ ಪ್ರಾಣ ಹಾನಿಯೂ ಉಂಟಾಗಿದೆ. ಎಲ್ಲದರ ಬಗ್ಗೆ ವರದಿ ಸಿದ್ಧವಾಗುತ್ತಿದೆ. ಸಂಜೆಯೊಳಗಡೆ ಅಧಿಕೃತ ಮಾಹಿತಿ ಪ್ರಕಟವಾಗುತ್ತದೆ ಎಂದರು.

ಇದನ್ನೂ ಓದಿ:ಬಿಎಸ್‌ವೈ ಮೂಲೆಗುಂಪು ಮಾಡಿದ್ದು ಯಾರು?: ಜೋಶಿಗೆ ಸಿದ್ದರಾಮಯ್ಯ ತಿರುಗೇಟು

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಆರು ತಿಂಗಳ ಹಿಂದೆಯೇ ಅಧ್ಯಕ್ಷರ ಬದಲಾವಣೆಗೆ ಕೋರ್ ಕಮಿಟಿಯಲ್ಲಿ ತೀರ್ಮಾನ ಮಾಡಿದ್ದೇವೆ. ಒಂದೂವರೆ ವರ್ಷ ಪೂರೈಸಿರುವ ಅಧ್ಯಕ್ಷರ ರಾಜೀನಾಮೆಗೆ ಸೂಚನೆ ನೀಡಿದ್ದೇವೆ. ಅಂತವರ ಪಟ್ಟಿ ತಯಾರಿಸಿದ್ದೇವೆ. ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next