ಬೆಂಗಳೂರು: ಕೇಂದ್ರ ಸರಕಾರದ ಪ್ರತಿನಿಧಿಗಳು ಭಾಗವಹಿಸುವ ರಾಜ್ಯದ ಕಾರ್ಯಕ್ರಮಗಳಲ್ಲಿ ಹಿಂದಿ ಹೇರಿಕೆಯಾಗುತ್ತಿದೆ ಎಂಬ ಆರೋಪಕ್ಕೆ ಈ ಬಾರಿ ತೆರೆ ಬಿದ್ದಿದೆ.
ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ ಮೊದಲ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಗೆ ಮಾತ್ರ ಆದ್ಯತೆ ನೀಡಲಾಗಿದೆ.
ಐಐಎಸ್ ಸಿ ಆವರಣದಲ್ಲಿ ಆಯೋಜಿಸಿದ್ದ ಮೊದಲ ಕಾರ್ಯಕ್ರಮ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟನೆ ಹಾಗೂ ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸುವ ಸಂದರ್ಭದಲ್ಲಿ ಫಲಕಗಳನ್ನು ಇಂಗ್ಲೀಷ್ ಹಾಗೂ ಕನ್ನಡದಲ್ಲಿ ಮಾತ್ರ ಕೆತ್ತಲಾಗಿತ್ತು. ಎಲ್ಲಿಯೂ ಹಿಂದಿ ಅವತರಣಿಕೆಗಳು ಇರಲಿಲ್ಲ. ಈ ಕಾರ್ಯಕ್ರಮ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಜತೆಗಿದ್ದರು.
ಇದನ್ನೂ ಓದಿ:ಮೋದಿ ಪ್ರವಾಸದಲ್ಲಿ ಯಾವುದೇ ರಾಜಕೀಯ ಭೇಟಿಗೆ ಅವಕಾಶವಿಲ್ಲ
ಐಐಎಸ್ ಸಿಗೆ ಆಗಮಿಸುವ ಮುನ್ನ ಮಾರ್ಗ ಮಧ್ಯೆ ಕಾರ್ಯಕರ್ತರು ಮೇಖ್ರಿ ವೃತ್ತದ ಬಳಿ ಮೋದಿ ಮೋದಿ ಎಂದು ಘೋಷಣೆ ಕೂಗಿದಾಗ ವಾಹನದ ವೇಗ ಕಡಿಮೆ ಮಾಡಿ ಮೋದಿ ಕಾರ್ಯಕರ್ತರತ್ತ ಕೈಬೀಸಿ ಮುಂದೆ ಸಾಗಿದರು.