Advertisement

ಜೂ.15ರಿಂದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಎಲ್ಲಾ ಹೊರರೋಗಿ ವಿಭಾಗಗಳು ಸೇವೆಗೆ ಲಭ್ಯ

02:26 PM Jun 13, 2020 | keerthan |

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಎಲ್ಲ ಹೊರರೋಗಿ ವಿಭಾಗಗಳು ಜೂನ್ 15ರಿಂದ ಹಿಂದಿನಂತೆ ಸೇವೆಗೆ ಲಭ್ಯವಾಗಲಿದೆ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಹೇಳಿದರು.

Advertisement

ಜೂನ್ 15ರಿಂದ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹೊರರೋಗಿ ವಿಭಾಗದ ಸೇವೆ ಲಭ್ಯವಾಗಲಿದೆ. ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಆಸ್ಪತ್ರೆಯ ಹೊರಾಂಗಣದಲ್ಲಿ ಹಾಕಿರುವ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು. ನಂತರ ಸಂಬಂಧಪಟ್ಟ ವಿಭಾಗಗಳಿಗೆ ಕಳುಹಿಸಿಕೊಡಲಾಗುವುದು. ಎಲ್ಲಾ ರೋಗಿಗಳು ಮತ್ತು ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪ್ರತೀ ರೋಗಿಗಳೊಂದಿಗೆ ಒಬ್ಬ ಸಹಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದಿದ್ದಾರೆ.

ಆಸ್ಪತ್ರೆಯ ಎಲ್ಲಾ ಮಾಹಿತಿ ಕೇಂದ್ರಗಳು ಸಹ ಸೋಮವಾರದಿಂದ ಕಾರ್ಯನಿರ್ವಹಿಸಲಿದ್ದು, ಜನರು ತಮ್ಮ ಊರಿನಲ್ಲಿಯೇ ನೋಂದಣಿ ಮಾಡಿ ಬರಬಹುದು. ಇದರಿಂದ ಆಸ್ಪತ್ರೆಯಲ್ಲಿ ನೋಂದಣಿಗಾಗಿ ಸರತಿ ಸಾಲಿನಲ್ಲಿ ನಿಲ್ಲುವುದು ಮತ್ತು ಜನದಟ್ಟಣೆ ಸೇರುವುದನ್ನು ಕಡಿಮೆ ಮಾಡಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next