Advertisement

ಜಿಲ್ಲಾದ್ಯಂತ ಅಂಬೇಡ್ಕರ್ ಪರಿನಿರ್ವಾಣ

12:40 PM Dec 07, 2021 | Team Udayavani |

ದೇವನಹಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಅಡಿಯಲ್ಲಿ ಸಂವಿಧಾನ ರಚಿಸಿಕೊಟ್ಟಿದ್ದಾರೆಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದರು. ಪಟ್ಟಣದ ಮಿನಿವಿಧಾನಸೌಧ ಆವರಣದ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಪ್ರತಿಮೆ ಆವರಣದಲ್ಲಿ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ರ 65ನೇ ಪುಣ್ಯ ಸ್ಮರಣೆ ಅಂಗವಾಗಿ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

Advertisement

ಅಂಬೇಡ್ಕರ್‌ ಈ ದೇಶದ ಶಕ್ತಿ, ಆಸ್ತಿ. ತಮ್ಮ ಬದುಕಿನ ಉದ್ದಕ್ಕೂ ಶೋಷಿತರ ಧ್ವನಿಯಾಗಿ ಸಂವಿಧಾನದ ಮೂಲಕ ಸಮಾಜದ ಕೆಳವರ್ಗಗಳಿಗೆ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಹಲವಾರು ಸೌಲಭ್ಯ ಕಲ್ಪಿಸಿದ್ದಾರೆಂದರು.

ಕ್ರಿಯಾಯೋಜನೆ: ಪುಸ್ತಕ ಓದುವುದರ ಮೂಲಕ ಪುಸ್ತಕ ಪ್ರೇಮಿಯಾಗಿದ್ದರು. ಶಿಕ್ಷಣದ ಮೂಲಕ ಮಾತ್ರ ಅಭಿವೃದ್ಧಿ, ಸಮಾಜದ ಬದಲಾವಣೆ ಸಾಧ್ಯ ಎಂದು ಪ್ರತಿಪಾದನೆ ಮಾಡಿದ ಅಂಬೇಡ್ಕರ್‌ ನಮ್ಮನ್ನು ಅಗಲಿ 65ವರ್ಷ ಕಳೆದಿದೆ. ಜಿಲ್ಲಾಡಳಿತ ಭವನದ ಹತ್ತಿರ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ.

ಇದನ್ನೂ ಓದಿ:- ಆರೋಗ್ಯ ಶಿಬಿರ ಗ್ರಾಮೀಣರಿಗೆ ಸಹಕಾರಿ

ಶೇ.50ರಷ್ಟು ಅನುದಾನ ಇದ್ದು ಪ್ರತಿಮೆಗೆ ಕ್ರಿಯಾಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು. ತಾಪಂ ಮಾಜಿ ಸದಸ್ಯ ಕಾರಹಳ್ಳಿ ಶ್ರೀನಿವಾಸ್‌, ತಾಲೂಕು ಸೊಸೈಟಿ ನಿರ್ದೇಶಕ ಎಸ್‌.ಗುರಪ್ಪ, ಭಾರತ ಜನಜಾಗೃತಿ ಸೇನೆ ರಾಜ್ಯಾಧ್ಯಕ್ಷ ಸಿ.ಮುನಿಯಪ್ಪ, ಮಾದಿಗ ದಂಡೋರ ಪ್ರಚಾರ ಸಮಿತಿ ಅಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ, ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ಮುನಿರಾಜ್‌, ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಕೆ.ವಿ.ಸ್ವಾಮಿ, ತಾಲೂಕು ದಲಿತ ಸಂಘರ್ಷ ಸಮಿತಿ ತಾಲೂಕು ಪ್ರಧಾನ ಸಂಚಾಲಕ ಅತ್ತಿಬೆಲೆ ನರಸಪ್ಪ, ಮಾಜಿ ಪುರಸಭಾ ಅಧ್ಯಕ್ಷ ಎಂ.ಮೂರ್ತಿ, ಜಿಲ್ಲಾ ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಾಣಿ, ಮುಖಂಡರಾದ ತಿಮ್ಮರಾಯಪ್ಪ, ಶಿವಾನಂದ್‌, ಮಾರಪ್ಪ ಮತ್ತಿತರರು ಇದ್ದರು.

Advertisement

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪುಣ್ಯಸ್ಮರಣೆ

ದೊಡ್ಡಬಳ್ಳಾಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ರ 65ನೇ ಪುಣ್ಯ ಸ್ಮರಣೆಯನ್ನು ಪರಿನಿರ್ವಾಣ ದಿನಾಚರಣೆಯಾಗಿ ಆಚರಿಸಲಾಯಿತು.

ಸ್ವಾತಂತ್ರ್ಯ:ನಗರದ ಸಿದ್ದಲಿಂಗಯ್ಯ ವೃತ್ತದ ಅಂಬೇಡ್ಕರ್‌ ಪ್ರತಿಮೆಗೆ ಶಾಸಕ ಟಿ.ವೆಂಕಟರಮಣಯ್ಯ, ಸೇರಿದಂತೆ ವಿವಿಧ ರಾಜಕೀಯ ಪಕ್ಷದ ಮುಖಂಡರು, ದಲಿತ ಸಂಘಟನೆಗಳ ಮುಖಂಡರು ಮಾಲಾರ್ಪಣೆ ಮಾಡಿದರು. ಕೆ ಪಿ ಸಿಸಿ ಸ ದಸ್ಯ ಜಿ. ಲಕ್ಷ್ಮೀಪತಿ ಮಾತನಾಡಿ, ಡಾ.ಬಿ.ಆರ್‌.ಅಂಬೇಡ್ಕರ್‌ ಜಾತ್ಯತೀತ ಮನೋಭಾವಕ್ಕೆ ಪ್ರೇರಣೆ ನೀಡಿ, ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ರೂಪಿಸಿಕೊಟ್ಟಿದ್ದಾರೆ.

ಅಂಬೇಡ್ಕರ್‌ ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಬೇಕಿದೆ. ಅಂಬೇಡ್ಕರ್‌ ಅವರ ಪರಿಶ್ರಮದಿಂದ ದಲಿತ ಮತ್ತು ಹಿಂದುಳಿದ ವರ್ಗಕ್ಕೆ ಸಮಾನತೆ ಹಾಗೂ ಸ್ವಾತಂತ್ರ್ಯ ದೊರೆತಿದೆ ಎಂದರು. ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಪಿ.ಜಗನ್ನಾಥ್‌, ನಗರ ಸಭಾ ಸದಸ್ಯ ನಾಗರಾಜ್‌, ಮುಖಂಡರಾದ ಮುನಿರಾಜು, ಆಂಜಿನಮೂರ್ತಿ ಮತ್ತಿತರರು ಇದ್ದರು.

ನಗರಸಭೆ ವತಿಯಿಂದ ನಗರಸಭಾ ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ಸೋಮಶೇಖರ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next