Advertisement

ಸೋಂಕು ತಡೆಗಟ್ಟಲು ಒಂದಾದ ಸರ್ವ ಪಕ್ಷ ಮುಖಂಡರು

09:02 AM Mar 30, 2020 | keerthan |

ಬೆಂಗಳೂರು: ರಾಜ್ಯಾದ್ಯಂತ ಕೋವಿಡ್-19 ಸೋಂಕು ಪೀಡಿತರ ಸಂಖ್ಯೆ ದಿನದಿಂದ ಹೆಚ್ಚುತ್ತಿದೆ. ದೇಶದಾದ್ಯಂತ ಲಾಕ್ ಡೌನ್ ಹೇರಲಾಗಿದೆ. ರಾಜ್ಯದಲ್ಲಿ ಸೋಂಕು ತಡೆಗಟ್ಟಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲು ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸರ್ವ ಪಕ್ಷ ಸಭೆ ಕರೆದಿದ್ದು, ಅದರಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

Advertisement

ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಏಕಮತದ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದ್ದಾರೆ.

ಸರ್ವ ಪಕ್ಷ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಇಲ್ಲಿವೆ.

*ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್‍ಗಳು ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿ ಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.

*ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳಲಾಗುವುದು.

Advertisement

* ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು.

* ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು.

*ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು.

*ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಒಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು.

*ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆ ಸೂಕ್ತ ವ್ಯವಸ್ಥೆ ಮಾಡಲಾಗುವುದು.

*ಪಡಿತರವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next