Advertisement

ಮುಂದಿನ ವಾರ ಸರ್ವಪಕ್ಷ ಸಭೆ: ಸಿಎಂ ಬೊಮ್ಮಾಯಿ

09:24 PM Nov 25, 2022 | Team Udayavani |

ಶಿವಮೊಗ್ಗ: ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಇರುವ ಪ್ರಕರಣಗಳಲ್ಲಿ ರಾಜ್ಯಕ್ಕೆ ಗಟ್ಟಿಯಾದ ಕಾನೂನು ನೆಲೆಗಟ್ಟಿದೆ. ಈ ವಿಷಯದಲ್ಲಿ ನಾವು ಸ್ಪಷ್ಟವಾಗಿದ್ದೇವೆ. ಗಡಿ ವಿಚಾರವಾದ್ದರಿಂದ ಮುಂದಿನ ವಾರ ಸರ್ವಪಕ್ಷ ಸಭೆ ಕರೆದಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ವಪಕ್ಷಗಳ ಸಭೆಯಲ್ಲಿ ಮತ್ತಷ್ಟು ಸಂಗತಿಗಳನ್ನು ಚರ್ಚಿಸಲಾಗುವುದು ಎಂದರು.

ಮಹಾರಾಷ್ಟ್ರದ ಕೆಲ ಗ್ರಾಮಗಳು ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸಿದ್ದವು ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮಾತನಾಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಗೆ ಧೈರ್ಯ ಇಲ್ಲ.
– ಉದ್ಧವ್‌ ಠಾಕ್ರೆ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ

ಬೆಳಗಾವಿ, ನಿಪ್ಪಾಣಿ ಸೇರಿ ಕೆಲ ನಗರಗಳನ್ನು ಬಿಟ್ಟು ಕೊಡಲು ಕರ್ನಾಟಕ ಒಪ್ಪಿದರೆ, ಅದಕ್ಕೆ ಪ್ರತಿಯಾಗಿ ಕೆಲ ಪ್ರದೇಶಗಳನ್ನು ಬಿಟ್ಟು ಕೊಡುವ ಬಗ್ಗೆ ನಾವೂ(ಮಹಾರಾಷ್ಟ್ರ) ಯೋಚಿಸಬಹುದು.
– ಶರದ್‌ ಪವಾರ್‌, ಎನ್‌ಸಿಪಿ ವರಿಷ್ಠ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next