Advertisement
ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಡಿಎಂಕೆಯ ಇಂತಹ ಬೆದರಿಕೆಗಳಿಗೆ ಯಾವುದೇ ರೀತಿಯ ಭಯ ಪಡಬೇಕಾಗಿಲ್ಲ. ಚುನಾವಣೆ ಮುಗಿದ ಮೇಲೆ ಮೇಕೆದಾಟು ಅಣೆಕಟ್ಟು ಕಟ್ಟಲು ನಾನೊಬ್ಬನೇ ಅಲ್ಲ, ರಾಜ್ಯ ಸರಕಾರ, ಮುಖ್ಯಮಂತ್ರಿಗಳು, ಬಿಜೆಪಿ ನಾಯಕರಾದ ಯಡಿಯೂರಪ್ಪ ಸಮೇತ ಹೋರಾಟ ಮಾಡೋಣ. ಅದಕ್ಕೂ ಮೊದಲು ಮೇಕೆದಾಟು ಕಟ್ಟುವುದನ್ನು ಪ್ರಣಾಳಿಕೆಯಲ್ಲಿ ಹಾಕೋಣ. ಡಿಎಂಕೆ ಮಿತ್ರಪಕ್ಷವಾದ ಕಾಂಗ್ರೆಸ್ ಮೇಕೆದಾಟು ಯೋಜನೆ ಬೆಂಬಲಿಸಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಲಿ ಎಂದು ಆಗ್ರಹಿಸಿದರು.
Related Articles
Advertisement
ರಾಜಕೀಯ ಬೆರೆಸಬೇಡಿನೀರಿಲ್ಲದೆ ಜನರು ಮನೆ ಬಿಟ್ಟು ಹೋಗುತ್ತಿದ್ದಾರೆ. ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜಕೀಯ ಅನಗತ್ಯ. ಯಾರೂ ಇದರಲ್ಲಿ ರಾಜಕೀಯ ಬೆರೆಸಬೇಡಿ. ಕುಡಿಯುವ ನೀರಿಗೆ ಮೊದಲ ಆದ್ಯತೆ ಕೊಡಬೇಕು.
ಮಾನವೀಯತೆಯಿಂದ ಮೇಕೆದಾಟು ಬಗ್ಗೆ ಎಲ್ಲರೂ ಯೋಚನೆ ಮಾಡಬೇಕು. ಇಲ್ಲಿ ರಾಜ್ಯ ಸರಕಾರದ ವೈಫಲ್ಯ ಅಂತಲ್ಲ. ತಮಿಳುನಾಡು ರಾಜ್ಯದವರು ಪ್ರತೀದಿನ ಕೋರ್ಟಿಗೆ ಪಿಟಿಷನ್ ಹಾಕುತ್ತಿದ್ದಾರೆ ಎಂದು ದೇವೇಗೌಡರು ತಿಳಿಸಿದರು. ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಕುಡಿಯುವ ನೀರಿಲ್ಲ ಎಂಬ ಕಾರಣಕ್ಕೆ ಮನೆಗಳಿಗೆ ಬೀಗ ಹಾಕಿ ಜನ ವಲಸೆ ಹೋಗಿದ್ದಾರೆ. ಈ ಭೀಕರ ಸಮಸ್ಯೆಗೆ ಪರಿಹಾರ ಒದಗಿಸಲು ರಾಜ್ಯ ಸರಕಾರದಿಂದ ಸಾಧ್ಯವಾಗಿಲ್ಲ. ಹೀಗಾಗಿ ಜನರು ತಮ್ಮ ಮನೆಗಳಿಗೆ ಬೀಗ ಹಾಕಿ ಬೇರೆ ಊರುಗಳಿಗೆ ಹೋಗುತ್ತಿದ್ದಾರೆ ಎಂದು ಮಾಜಿ ಪ್ರಧಾನಿಗಳು ವಿವರಿಸಿದರು. ಬಾಂಧವ್ಯ ಬೆಸೆದಿದ್ದ ಬಿಎಸ್‌ವೈ
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ತಮಿಳುನಾಡಿನ ಜತೆ ಸಂಬಂಧ ವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ, ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳನ್ನು ಸ್ಥಾಪಿಸಿ ಒಳ್ಳೆಯ ಬಾಂಧವ್ಯಕ್ಕೆ ನಾಂದಿ ಹಾಡಿದ್ದರು. ಎರಡೂ ರಾಜ್ಯಗಳ ಸಂಬಂಧದ ವಿಚಾರದಲ್ಲಿ ಅದೊಂದು ಒಳ್ಳೆಯ ಸಂದರ್ಭ ಎಂದು ದೇವೇಗೌಡರು ಉಲ್ಲೇಖಿಸಿದರು.