Advertisement

ಬಿಜೆಪಿ ಗೆಲುವಿಗೆ ಸಕಲ ಸಿದ್ಧತೆ: ಸಂಜಯ

03:32 PM Nov 19, 2021 | Team Udayavani |

ಬೆಳಗಾವಿ: ವಿಧಾನ ಪರಿಷತ್‌ ಚುನಾವಣೆಯಲ್ಲಿ ಯಾವುದೆ ಭಾಷೆ ಮತ್ತು ಜಾತಿಗೆ ಸೀಮಿತವಾಗದೆ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು.

Advertisement

ನಗರದ ರೆಡ್ಡಿ ಭವನದಲ್ಲಿ ಗುರುವಾರ ಜರುಗಿದ ಜನ ಸ್ವರಾಜ್‌ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬರುವ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪಕ್ಷದ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮತದಾರರು ಅವಿರತ ಪರಿಶ್ರಮ ಹಾಕುವ ಮೂಲಕ ಅಭೂತಪೂರ್ವ ಜಯ ತಂದುಕೊಡಲಿದ್ದಾರೆ ಎಂದರು.

ಜನ ಸ್ವರಾಜ್‌ ಸಮಾವೇಶದ ಬಗ್ಗೆ ಪ್ರಸ್ತಾಪಿಸಿದ ಅವರು, ಬೆಳಗಾವಿಯಲ್ಲಿ ರವಿವಾರ ನಡೆಯುವ ಜನ ಸ್ವರಾಜ್‌ ಸಮಾವೇಶಕ್ಕೆ ಸಾವಿರಾರು ಮತದಾರರು ಆಗಮಿಸಿ ಚುನಾವಣೆಗೆ ಹೊಸ ಸಂದೇಶ ರವಾನಿಸಲಿದ್ದಾರೆ. ಇದು ಮಾದರಿ ಸಮಾವೇಶವಾಗಲಿದೆ ಎಂದು ಹೇಳಿದರು.

ವಿಧಾನಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್‌ ಚುನಾವಣೆಯಲ್ಲಿ ಕೆಲ ಅಭ್ಯರ್ಥಿಗಳು ಈಗಾಗಲೇ ಮತದಾರರಿಗೆ ಕಾಣಿಕೆಗಳನ್ನು ನೀಡುವುದು ಮತ್ತು ಹಣದ ಆಮಿಷ ಒಡ್ಡುವುದು ನಡೆದಿದೆ. ಆದರೆ ಈ ಚುನಾವಣೆಯಲ್ಲಿ ಯಾವ ಆಮಿಷಗಳು ಗಣನೆಗೆ ಬರುವುದಿಲ್ಲ ಎಂದರು.

ಈ ಬಾರಿ ಗ್ರಾಮ ಪಂಚಾಯಿತಿಗಳ ಹೆಚ್ಚಿನ ಸ್ಥಾನಗಳಲ್ಲಿ ಪದವೀಧರರು, ಸ್ನಾತಕೋತ್ತರ ಪದವೀಧರರು ಹಾಗೂ ವಿದ್ಯಾವಂತರು ಆಯ್ಕೆಯಾಗಿ ಬಂದಿದ್ದು, ವಿಧಾನಪರಿಷತ್‌ ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗೆ ಮತ ನೀಡಿ ಗೆಲುವಿಗೆ ಸಹಕಾರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಬಿಜೆಪಿ ರಾಜ್ಯ ವಕ್ತಾರ ಎಂ.ಬಿ ಜೀರಲಿ ಮಾತನಾಡಿ, ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮಾವೇಶಕ್ಕೆ ಆಗಮಿಸುತ್ತಿರುವುದರಿಂದ ಇದರ ಯಶಸ್ಸಿಗೆ ಹೆಚ್ಚಿನ ಪ್ರಮಾಣದಲ್ಲಿ ಶ್ರಮವಹಿಸಬೇಕು ಎಂದರು.

Advertisement

ಶಾಸಕ ಅನಿಲ ಬೆನಕೆ ಮಾತನಾಡಿ, ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನಾಯಕರು ನೀಡುವ ಸೂಚನೆಯಂತೆ ಕಾರ್ಯನಿರ್ವಹಿಸುವದಾಗಿ ಹೇಳಿದರು. ಸಭೆಯಲ್ಲಿ ಸಂಸದೆ ಮಂಗಲ ಅಂಗಡಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ ರಾಜೇಶ್‌ ನೆರ್ಲಿ, ಮಹಾನಗರ ಅಧ್ಯಕ್ಷ ಶಶಿಕಾಂತ ಪಾಟೀಲ, ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವನಾಚೆ, ವಿಭಾಗ ಸಹ ಸಂಘಟನಾ ಸಹ ಕಾರ್ಯದರ್ಶಿ ಜಯಪ್ರಕಾಶ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ, ರಾಜೇಂದ್ರ ಹರಕುಣಿ, ಮಹಾನಗರ ಉಸ್ತುವಾರಿ ರಮೇಶ ದೇಶಪಾಂಡೆ, ಮಹಾನಗರ ಪ್ರಧಾನ ಕಾರ್ಯದರ್ಶಿ ದಾದಾಗೌಡ ಪಾಟೀಲ್‌, ಗಿರೀಶ್‌ ಧೋಂಗಡಿ, ಜಿಲ್ಲಾ ಖಜಾಂಚಿ ಮಲ್ಲಿಕಾರ್ಜುನ ಮಾದಮ್ಮನವರ, ನಗರ ಸೇವಕ ಹನುಮಂತ ಕೊಂಗಾಲಿ, ಜಿಲ್ಲಾ ಮಾಧ್ಯಮ ಸಂಚಾಲಕ ಎಫ್‌ ಎಸ್‌ ಸಿದ್ದನಗೌಡರ ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್‌ ದೇಶಪಾಂಡೆ ಸ್ವಾಗತಿಸಿದರು,ಮುರುಘೇಂದ್ರಗೌಡ ಪಾಟೀಲ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next