Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಜ್ಜು: ಕೂರ್ಮಾರಾವ್‌

09:11 AM Jun 23, 2020 | Suhan S |

ಯಾದಗಿರಿ: ಕೋವಿಡ್‌-19ನಿಂದಾಗಿ ಮುಂದೂಡಿದ್ದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ಜೂ.25ರಿಂದ ಜು.4ರವರೆಗೆ ನಡೆಸಲಾಗುತ್ತಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾದ್ಯಂತ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ತಿಳಿಸಿದರು.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ

Advertisement

ಸೋಮವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂಬಂಧ ಪೋಷಕರು ಮತ್ತು ವಿದ್ಯಾರ್ಥಿಗಳು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತ ಕರಪತ್ರ ಹಾಗೂ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 17,396 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 52 ಮುಖ್ಯ ಪರೀಕ್ಷಾ ಕೇಂದ್ರ ಮತ್ತು 7 ಉಪ ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ. ಒಟ್ಟು 870 ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ. ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ನಿರಾತಂಕವಾಗಿ ಪರೀಕ್ಷೆ ಬರೆಯಬೇಕು ಎಂದರು.

ಪರೀಕ್ಷೆಗೆ ಬರುವಾಗ ಮಕ್ಕಳು ಮನೆಯಿಂದಲೇ ಬಾಟಲಿಗಳಲ್ಲಿ ಕಾಯಿಸಿದ ನೀರು ತರಬೇಕು. ಬೆಳಗ್ಗೆ 8 ಗಂಟೆಯಿಂದಲೇ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶ ನೀಡಿದ್ದು, ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೆಗೆದುಕೊಂಡು ಬರಬೇಕು. ಪ್ರತಿ ಕೇಂದ್ರದಲ್ಲಿ ಜ್ವರ ತಪಾಸಣೆಗೆ ಥರ್ಮಲ್‌ ಸ್ಕ್ರೀನಿಂಗ್‌ ಕೌಂಟರ್‌ ಸ್ಥಾಪಿಸಲಾಗಿದೆ. ಅಲ್ಲಿ ಸ್ಯಾನಿಟೈಸ್‌ ಮಾಡುವ ಜೊತೆಗೆ ಪ್ರತಿ ವಿದ್ಯಾರ್ಥಿಗೆ ಮಾಸ್ಕ್ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.

ಜಿಪಂ ಸಿಇಒ ಶಿಲ್ಪಾ ಶರ್ಮಾ, ಎಸ್ಪಿ ಋಷಿಕೇಶ್‌ ಸೋನವಣೆ, ಡಿಡಿಪಿಐ ಶ್ರೀನಿವಾಸ ರೆಡ್ಡಿ, ಎಸ್‌ಎಸ್‌ಎಲ್‌ಸಿ ಜಿಲ್ಲಾ ನೋಡಲ್‌ ಅಧಿಕಾರಿ ಡಾ| ಮಲ್ಲಪ್ಪ ಯರಗೋಳ, ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next