Advertisement
ಹೊಸ ಖಾಸಗಿ ಶಾಲೆಗಳಿಗೆ ಅನುಮತಿ ನೀಡಬಾರದು ಹಾಗೂ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಲು ಮೇ.8 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.
Related Articles
Advertisement
ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಸಂವಿದಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಆಂಬೇಡ್ಕರ್‌ರವರ ಏಕ ರೂಪದ ಶಿಕ್ಷಣದ ಕನಸು ಕನಸಾಗಿಯೇ ಉಳಿದಿದೆ. ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಜತೆಗೆ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಶಿಕ್ಷಕರು ವಿಫಲರಾಗಿದ್ದಾರೆ ಎಂದು ದೂರಿದರು.
ಬಡವರಿಗೆ ಅನುಕೂಲವಾಗಿದ್ದ ಆರ್‌ಟಿಇ ಯನ್ನು ಸಹ ಕಸಿದು ಸಂಪೂರ್ಣವಾಗಿ ಬಡವರ ಮಕ್ಕಳನ್ನು ಶಿಕ್ಷಣದಿಂದ ವಂಚಿತ ಮಾಡುತ್ತಿರುವ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಖಾಸಗಿ ಶಿಕ್ಷಣ ನೀತಿಯನ್ನು ಖಂಡಿಸಿ ಶಿಕ್ಷಣ ಇಲಾಖೆಯ ಮುತ್ತಿಗೆ ಹಾಕುವ ಎಚ್ಚರಿಕೆಯನ್ನು ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್, ತೆರ್ನಹಳ್ಳಿ ಆಂಜಿನಪ್ಪ, ಬೂದಿಕೋಟೆ ಹರೀಶ್, ಪ್ರವೀಣ್, ರಮೇಶ್, ತ್ಯಾಗರಾಜ್, ಪುರುಷೋತ್ತಮ್, ಕೆಂಬೋಡಿ ಕೃಷ್ಣೇಗೌಡ, ನಾಗರಾಜ್, ಅನಿಲ್ ಇತರರು ಇದ್ದರು.