ಅಹಮದಾಬಾದ್: ಗೋಹತ್ಯೆ ತಡೆದರೆ ಭೂಮಿಯ ಎಲ್ಲಾ ಸಮಸ್ಯೆಗಳೂ ಬಗೆಹರಿಯುತ್ತವೆ ಎಂದು ಗೋವು ಕಳ್ಳಸಾಗಣೆ ಪ್ರಕರಣದ ವಿಚಾರಣೆ ವೇಳೆ ಗುಜರಾತ್ ನ್ಯಾಯಾಲಯವೊಂದು ಅಭಿಪ್ರಾಯಪಟ್ಟಿದೆ.
ಮಹಾರಾಷ್ಟ್ರದಿಂದ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಗಳಿಗೆ ತಾಪಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಿತು.
ವಿಶ್ವಕ್ಕೆ ಗೋವು ಮುಖ್ಯವಾಗಿದ್ದು, ಗೋವಿನ ರಕ್ತವು ಬೀಳದಿದ್ದರೆ ಭೂಮಿ ಸ್ಥಾಪನೆಯಾಗುತ್ತದೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಮೀರ್ ವಿನೋದಚಂದ್ರ ವ್ಯಾಸ್ ಹೇಳಿದರು ಎಂದು ವರದಿಯಾಗಿದೆ.
ಇದನ್ನೂ ಓದಿ:ಒಂದೂ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲಿಸಬೇಡಿ, ಆಗ ರಾಜಕಾರಣ ಸ್ವಚ್ಛವಾಗುತ್ತದೆ: ಸಿ.ಟಿ ರವಿ
ತೀರ್ಪು ನೀಡಿದ ಅವರು, ಗೋವು ಕೇವಲ ಪ್ರಾಣಿಯಲ್ಲ ಅದು ತಾಯಿ. ಹಸುವಿನಷ್ಟು ಕೃತಜ್ಞತೆ ಯಾವುದೂ ಇಲ್ಲ ಎಂದು ಹೇಳಿದರು.
“ಹಸುವಿನ ರಕ್ತವು ಭೂಮಿಯ ಮೇಲೆ ಇಳಿಯದ ದಿನ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ” ಎಂದು ಅವರು ಹೇಳಿದರು. ಗೋಸಂರಕ್ಷಣೆಗೆ ಸಂಬಂಧಿಸಿದ ಮಾತುಕತೆಗಳು ಕಾರ್ಯರೂಪಕ್ಕೆ ಬಂದಿಲ್ಲ ಎಂದೂ ನ್ಯಾಯಾಧೀಶರು ಆಕ್ರೋಶ ವ್ಯಕ್ತಪಡಿಸಿದರು.