Advertisement

ಕೋವಿಡ್ -19 ನಿಯಂತ್ರಿಸಲು ಎಲ್ಲ ಧರ್ಮಗುರುಗಳು ಸಹಕರಿಸಬೇಕು: ಸಿಎಂ ಯಡಿಯೂರಪ್ಪ ಮನವಿ

09:06 AM Apr 03, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಸೋಂಕನ್ನು ಸಮರ್ಥವಾಗಿ ನಿಯಂತ್ರಿಸಲು ಎಲ್ಲಾ ಧರ್ಮಗುರುಗಳು ಸಹಕರಿಸಬೇಕು. ತಮ್ಮ ಸಮುದಾಯದ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಮತ್ತು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿಲ್ಲಿಯ ನಿಜಾಮುದ್ದೀನ್‍ನಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡ 391 ಜನರನ್ನು ಈಗಾಗಲೇ ಗುರುತಿಸಿ ಹೋಮ್ ಕ್ವಾರಂಟೈನ್/ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇಡಲಾಗಿದೆ ಎಂದರು.

ಇನ್ನೂ ಹಲವರಿದ್ದು ಅವರನ್ನೂ ಪತ್ತೆ ಮಾಡಲಾಗುತ್ತಿದೆ. ಇವರು ಧರ್ಮಪ್ರಚಾರ ಮತ್ತು ಇತರ ಚಟುವಟಿಕೆಗಳಿಗಾಗಿ ವಿವಿಧ ಜಿಲ್ಲೆಗಳಿಗೆ ತೆರಳಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಅಲ್ಲಿಯೇ ಸಿಲುಕಿಕೊಂಡಿರುವ ಸಾಧ್ಯತೆ ಇದೆ. ಇವರು ಎಲ್ಲಿದ್ದಾರೆಯೋ ಅಲ್ಲಿಯೇ ಕ್ವಾರಂಟೈನ್ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಈ ಬಗ್ಗೆ ವ್ಯಾಪಕ ವಿಚಾರಣೆ ಮತ್ತು ತಾಂತ್ರಿಕ ಪ್ರಯತ್ನಗಳ ಅಗತ್ಯವಿದೆ ಎಂದರು.

ದಿಲ್ಲಿ ನಿಜಾಮುದ್ದೀನ್ ನಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸಿದವರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಅವರಲ್ಲಿ ಬೀದರ್‍ ನಲ್ಲಿ 91 ಜನರನ್ನು ಪರೀಕ್ಷಿಸಲಾಗಿದ್ದು, 11 ಜನರಿಗೆ ಕೋವಿಡ್ 19 ಸೋಂಕು ಪತ್ತೆಯಾಗಿದೆ.  ಬೆಂಗಳೂರಿನಲ್ಲಿ 30 ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಲಾಗಿದ್ದು, ಅವರಿಗೆ ಸೋಂಕು ತಾಗಿಲ್ಲ ಎಂದು ತಿಳಿದು ಬಂದಿದೆ ಎಂಬ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next